ಕುಂದಾಪುರ: ತಾಲೂಕು ಪಗ್ರತಿ ಪರಿಶೀಲಾ ಸಭೆ

 ಕುಂದಾಪುರ: ಪ್ರತಿಯೊಂದು ಕಾರ್ಯವನ್ನು ಎಲ್ಲರೊಂದಿಗೆ ಸಮನ್ವಯತೆಯಿಂದ‌ ಮಾಡಿದರೆ ಆ ಕಾರ್ಯದಲ್ಲಿ ಯಶಸ್ಸು ಸುಲಭ ಸಾಧ್ಯ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಉಪೇಂದ್ರ ನಾಯಕ್‌ ಹೇಳಿದರು.
      ಅವರು ಕುಂದಾಪುರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದರು.
      ಅರ್ಥಿಕ ವರ್ಷದ ಯೋಜನೆಗಳ ಅನುಷ್ಠಾನದ ಕುರಿತಂತೆ ಜಿ. ಪಂ. ಸದಸ್ಯರು, ಗ್ರಾ. ಪಂ. ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಗ್ರಾಮ ಕರಣಿಕರು ಹಾಗೂ ತಾಲೂಕು ಮಟ್ಟದ ಅಧಿಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು ಅಧಿಕಾರಿಗಳು ಜನಪ್ರತಿನಿಧಿಗಳ ನಡುವೆ ಉತ್ತಮ ಹೊಂದಾಣಿಕೆ ಏರ್ಪಟ್ಟು ಗ್ರಾಮದ ಸಮಗ್ರ ಪ್ರಗತಿಯ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ಸಂಘಟನೆಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
    ಸರಕಾರಿ ಜಾಗದಲ್ಲಿ 15 ವರ್ಷದಿಂದ ಅನಧಿಕೃತವಾಗಿ ಗುಡಿಸಲು ಕಟ್ಟಿಕೊಂಡು ವಾಸಿಸುವವರಿಗೆ ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ತತ್‌ಕ್ಷಣ ಈ ಬಗ್ಗೆ ಗ್ರಾ. ಪಂ.ಗಳು ಕಾರ್ಯಪ್ರವೃತ್ತವಾಗಬೇಕು. ಇಂತಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಆಯಾ ಪಂಚಾಯಿತ್‌ಗಳ ಅಭಿವೃದ್ಧಿ ಅಧಿಕಾರಿಗಳೇ ನಿರ್ವಹಿಸಬೇಕು ಎಂದರು.
     ಜಿ. ಪಂ. ಸಿಇಒ ಪ್ರಭಾಕರ ಶರ್ಮ, ತಾ. ಪಂ. ಅಧ್ಯಕ್ಷೆ ದೀಪಿಕಾ ಶೆಟ್ಟಿ, ಉಪಾಧ್ಯಕ್ಷೆ ಹೇಮಾವತಿ ಪೂಜಾರಿ, ಜಿ. ಪಂ. ಉಪಾಧ್ಯಕ್ಷೆ ಮಮತಾ ಆರ್‌. ಶೆಟ್ಟಿ, ಜಿ. ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್‌, ತಹಶೀಲ್ದಾರ್‌ ಗಾಯತ್ರಿ ನಾಯಕ್‌, ಜಿ. ಪಂ. ಲೆಕ್ಕಾಧಿಕಾರಿ ತಿಮ್ಮಪ್ಪ, ಯೋಜನಾಧಿಕಾರಿ ವಿಜಯಕುಮಾರ್‌ ಶೆಟ್ಟಿ, ಕುಂದಾಪುರ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com