ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್- ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲ್ ರಸ್ತೆಯ ಮೊಗವೀರ ಭವನದಲ್ಲಿ ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಘಟಕ ಆಶ್ರಯದಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.          ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ.ಜಿ.ಶಂಕರ್ , ಪ್ರಯೋಜನ ಪಡೆದುಕೊಳ್ಳುವ ವಿದ್ಯಾರ್ಥಿಗಳು ಸಮಾಜವನ್ನು ಮರೆಯಕೂಡದು. ಬಹಳ ಹಿಂದೆ ಶಿಕ್ಷಣಕ್ಕೆ ಬಹಳ ಕಷ್ಟವಿತ್ತು. ಪ್ರಸ್ತುತ ಶಿಕ್ಷಣಕ್ಕೆ ಪೂರಕವಾದ ಸಹಕಾರ ಸಿಗುತ್ತಿದೆ ಎಂದರು.
    ಜಿಲ್ಲೆಯ 5100 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಗಿದೆ. ಸಂಘಟನೆ ವ್ಯಾಪ್ತಿಯಲ್ಲಿ ಪುಸ್ತಕ ವಿತರಿಸಬೇಕು ಎಂಬ ನೆಲೆಯಲ್ಲಿ ಕುಂದಾಪುರದಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದರು
      ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಅಧ್ಯಕ್ಷ ಎಂ.ಎಂ.ಸುವರ್ಣ ಶುಭ ಹಾರೆಸಿದರು. ಮಧುಶ್ರೀ ಪ್ರಾರ್ಥಿಸಿದರು. ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ ಅಧ್ಯಕ್ಷ ಸದಾನಂದ ಬಳ್ಕೂರು ಸ್ವಾಗತಿಸಿದರು. ಜಿಲ್ಲಾ ಮೊಗವೀರ ಯುವ ಸಂಘಟನೆ ಪ್ರಧಾನ ಕಾರ್ಯದರ್ಶಿ ಗಣೇಶ ಕಾಂಚನ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com