ಮಾಹಿತಿ ಹಕ್ಕು ಕಾಯ್ದೆ ಸದ್ಭಳಕೆ- ರಾಜ್ಯದಲ್ಲೇ ಉಡುಪಿ ಪ್ರಥಮ

ಉಡುಪಿ: ಮಾಹಿತಿ ಹಕ್ಕಿನನ್ವಯ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಯೋಜನೆಯು ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಜಾರಿಗೆ ಬಂದಿದ್ದು, ಈ ಮೇ ತಿಂಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಸಚಿವ ಸೊರಕೆ ಅವರು ಶನಿವಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂತಸ ವ್ಯಕ್ತಪಡಿಸಿದರು.
      ಈ ಬಗ್ಗೆ ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಕುಮಾರ್, ಸಲ್ಲಿಸಲಾದ ಅರ್ಜಿಗಳ ವಿಲೇವಾರಿಯ ಆಧಾರದಲ್ಲಿ ಈ ಸ್ಥಾನ ದೊರೆಯುತ್ತಿದೆ. ಈ ಯೋಜನೆ ಜಾರಿಗೆ ಬಂದ ನಂತರ ಉಡುಪಿ ಜಿಲ್ಲೆ ಮೊದಲ 5 ಸ್ಥಾನಗಳಲ್ಲಿದೆ. ಅನೇಕ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಗಳಿಸಿದೆ. ಫೆಬ್ರವರಿ ತಿಂಗಳಲ್ಲಿ ಪ್ರಥಮ, ಏಪ್ರಿಲ್ ತಿಂಗಳಲ್ಲಿ 2ನೇ ಸ್ಥಾನದಲ್ಲಿತ್ತು. ಮೇ ತಿಂಗಳಲ್ಲಿ ಮತ್ತೆ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :
 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com