ಡಿಟಿ.ಇಡಿ/ಡಿ.ಪಿ.ಇಡಿ ಕೋರ್ಸ್‌: ಪ್ರವೇಶಾತಿ

ಉಡುಪಿ: ಡಿ.ಇಡಿ ಮತ್ತು ಡಿ.ಪಿ.ಇಡಿ ಕೋರ್ಸಿನ ವ್ಯಾಸಂಗಕ್ಕೆ ಉಡುಪಿ ಮತ್ತು ಮಂಗಳೂರಿನ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು (ಡಯಟ್‌) ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರವೇಶ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಪಡೆಯಬಹುದು.
     ಪಿಯುಸಿ ಉತ್ತೀರ್ಣರಾಗಿರಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶೇ. 45 ಮತ್ತು ಇತರರಿಗೆ ಶೇ. 50 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಯನ್ನು www.schooleducation.kar.nic.in ವೆಬ್‌ಸೈಟ್‌ನಿಂದ ಪಡೆಯಬಹುದು. ಅರ್ಜಿ ಭರ್ತಿ ಮಾಡಿ ಜೂ. 20ರ ಒಳಗೆ ಡಯಟ್‌ಗೆ ಸಲ್ಲಿಸತಕ್ಕದ್ದು. ಅರ್ಜಿಗಳು ಡಯಟ್‌ ಅಥವಾ ಇನ್ನಿತರ ಯಾವುದೇ ಕಚೇರಿಗಳಲ್ಲಿ ಲಭ್ಯ ಇರುವುದಿಲ್ಲ ಎಂದು ಡಯಟ್‌ನ ಪ್ರಕಟನೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com