ಕಾನೂನು ಸಾಕ್ಷರತಾ ಕಾರ್ಯಕ್ರಮ

ಕುಂದಾಪುರ: ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಗ ಇಲಾಖೆ, ಪೊಲೀಸ್‌ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್‌ ಮತ್ತು ಶಿಶು ಅಭಿವೃದ್ಧಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ರಥದ ಮೂಲಕ ಮೂರು ದಿನಗಳ ಕಾನೂನು ಸಾಕ್ಷರತಾ ಕಾರ್ಯಕ್ರಮಗಳು ಜೂ. 12ರಿಂದ ಆರಂಭವಾಗುತ್ತಿವೆ.
      ಬುಧವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
       ಆ ಬಳಿಕ 10 ಗಂಟೆಗೆ ಗಂಗೊಳ್ಳಿ ಎಸ್‌.ವಿ. ಪದವಿ ಪೂರ್ವ ಕಾಲೇಜು, 12ಕ್ಕೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಮತ್ತು ಅ. 2.30ಕ್ಕೆ ಕನ್ಯಾನದ ನಮ್ಮಭೂಮಿಯಲ್ಲಿ ಕಾನೂನು ಮಾಹಿತಿ ಶಿಬಿರಗಳು ನಡೆಯುವುವು.
        ಗುರುವಾರ 10.30ರಿಂದ ಸಾಯºರಕಟ್ಟೆ ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ, 12ಕ್ಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಮತ್ತು 2.30ಕ್ಕೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾಹಿತಿ ಕಾರ್ಯಕ್ರಮ ನಡೆಯುವುದು. ಶುಕ್ರವಾರ 10 ಗಂಟೆಗೆ ಕುಂದಾಪುರ ಮೊಗವೀರ ಸಭಾಭವನ, 12ಕ್ಕೆ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಅ. 4ಕ್ಕೆ ನ್ಯಾಯಾಲಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಸ್ಥಳಗಳಲ್ಲಿ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು, ಪರಿಣತ ನ್ಯಾಯಾವಾದಿಗಳು ಕಾನೂನಿನ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡುವರು ಎಂದು ಸಂಘಟನೆಗಳ ಪ್ರಕಟನೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com