ಶಾಸಕ ಗೋಪಾಲ ಪೂಜಾರಿಗೆ ಅಂಭಿನಂದನೆ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ರದ್ದಾಗಿರುವ ಸುಮಾರು 26 ಸಾವಿರ ಪಡಿತರ ಚೀಟಿ ಸಮಸ್ಯೆಯನ್ನು ತಕ್ಷಣ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಜೆಟ್‌ ಅಧಿವೇಶನ ಮುಗಿದ ತಕ್ಷಣ ರೇಶನ್‌ ಕಾರ್ಡ್‌ ಸಮಸ್ಯೆಯನ್ನು ಬಗೆಹರಿಸಲಿದ್ದೇವೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಒಂದು ವರ್ಷದಲ್ಲಿ ಪ್ರತಿ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಕ್ರಮ ಜರುಗಿಸಲಾಗುವುದು. ಕೆಲವು ಜಿಲ್ಲಾ ಪಂಚಾಯತ್‌ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆಗೆ ಸೇರಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಬೆ„ಂದೂರು ಶಾಸಕ ಗೋಪಾಲ ಪೂಜಾರಿ ಹೇಳಿದರು.
     ಅವರು ಮಾರಣಕಟ್ಟೆಯ ವಾಸುಕಿ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಕ್ಷೇತ್ರದ ಜನತೆ ಸುಮಾರು 31 ಸಾವಿರಕ್ಕೂ ಹೆಚ್ಚಿನ ಅಂತರದ ಗೆಲುವನ್ನು ನನಗೆ ನೀಡಿದ್ದು, ಜನರ ಭರವಸೆಗೆ ಅನುಗುಣವಾಗಿ ಕೆಲಸ ಮಾಡಲು ಶ್ರಮಿಸುತ್ತಿದ್ದು ಪ್ರತೀ ಶುಕ್ರವಾರ ಬೆ„ಂದೂರು ಶಾಸಕರ ಕಚೇರಿಯಲ್ಲಿ ನಾನು ಸಾರ್ವಜನಿಕರಿಗೆ ಲಭ್ಯನಿರುತ್ತೇನೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಚಿತ್ತೂರು ಗ್ರಾ.ಪಂ. ಅಧ್ಯಕ್ಷ ಸುರೇಂದ್ರ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ರಾಜು ದೇವಾಡಿಗ ತ್ರಾಸಿ, ತಾ.ಪಂ. ಸದಸ್ಯ ಹಕೂìರು ಮಂಜಯ್ಯ ಶೆಟ್ಟಿ, ಮಾಜಿ ತಾ.ಪಂ. ಸದಸ್ಯ ಗುಂಡು ಪೂಜಾರಿ, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಸನ್ನಕುಮಾರ ಶೆಟ್ಟಿ ಕೆರಾಡಿ, ವಾಸುಕಿ ಸಭಾಂಗಣದ ಮಾಲಕ ಶಂಕರ ಭಟ್‌ ಮಾರಣಕಟ್ಟೆ ಭಾಗವಹಿಸಿದ್ದರು. ಇದೇ ಸಂದರ್ಭ ಶಾಸಕ ಗೋಪಾಲ ಪೂಜಾರಿ ಅವರನ್ನು ಗ್ರಾಮೀಣ ಕಾಂಗ್ರೆಸ್‌ ವತಿಯಿಂದ ಸಮ್ಮಾನಿಸಲಾಯಿತು. ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
 ನ್ಯಾಯವಾದಿ ಸರ್ವೋತ್ತಮ ಶೆಟ್ಟಿ ಸ್ವಾಗತಿಸಿದರು. ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಉದಯ ಜಿ.ಪೂಜಾರಿ ವಂದಿಸಿದ್ದು ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದ್ದರು. .
*
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com