ಗಂಗೊಳ್ಳಿ-ಕುಂದಾಪುರ ಬಸ್ ಪ್ರಯಾಣ ದರ ಇಳಿಕೆ

ಕುಂದಾಪುರ: ಗಂಗೊಳ್ಳಿ- ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಜೂ.19ರಿಂದ ರು. 17ಕ್ಕೆ ಇಳಿಕೆ ಮಾಡಲಾಗಿದೆ.
    ರಾಜ್ಯ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಶೇ.10.5ರಷ್ಟು ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಗಂಗೊಳ್ಳಿ- ಕುಂದಾಪುರ ನಡುವಿನ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಜೂ.16ರಿಂದ ರು. 15ರಿಂದ ರು. 21ಕ್ಕೆ ಏರಿಕೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನಾಗರಿಕರು ಹಾಗೂ ನಿತ್ಯ ಪ್ರಯಾಣಿಕರು ಮಂಗಳೂರಿನ ವಿಭಾಗೀಯ ನಿಯಂತ್ರಣಾಧಿಕಾರಿ ಬಳಿ ಮನವಿ ಮಾಡಿದ್ದರು. ಒತ್ತಡಕ್ಕೆ ಮಣಿದ ಅಧಿಕಾರಿಗಳು, ಪ್ರಯಾಣ ದರ ಇಳಿಕೆ ಮಾಡಿದ್ದಾರೆ. ಈ ಕ್ರಮವನ್ನು ಸ್ವಾಗತಿಸಿರುವ ಸ್ಥಳೀಯ ನಾಗರಿಕ ಹೋರಾಟ ಸಮಿತಿ, ಈ ಬಗ್ಗೆ ಶ್ರಮಿಸಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com