ಕುಂದಾಪುರ ನಗರ ಬಿ.ಜೆ.ಪಿ ಶಕ್ತಿ ಕೇಂದ್ರ ಸಭೆ

ಕುಂದಾಪುರ: ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕುಂದಾಪುರ ನಗರ ಶಕ್ತಿ ಕೇಂದ್ರ ಸಭೆಯು ಪಕ್ಷದ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷ ಕಿಶೋರ್‌ ಕುಮಾರ್‌ರವರು ವಹಿಸಿದ್ದರು. ಈ ಸಂದರ್ಭದಲ್ಲಿ ನೂತನ ಶಕ್ತಿ ಕೇಂದ್ರದ ಅಧ್ಯಕ್ಷರನ್ನಾಗಿ ರವಿರಾಜ್‌ ಖಾರ್ವಿ ಅವರನ್ನು, ಪ್ರಧಾನ ಕಾರ್ಯದರ್ಶಿಯನ್ನಾಗಿ ಅರುಣ್‌ ಕುಮಾರ್‌ ಬಾಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
    ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿರಾಜ್‌ ಖಾರ್ವಿ ಮಾತನಾಡಿ, ವಿಧಾನ ಸಭಾ ಚುನಾವಣೆಯಲ್ಲಿ ಸಾಂಘಿಕವಾಗಿ ಹೋರಾಟವನ್ನು ನಡೆಸಿದ್ದೇವೆ. ಈ ನಿಟ್ಟಿನಲ್ಲಿ ಮುಂದೆ ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿಲು ಶಕ್ತಿ ಕೇಂದ್ರದ ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಹೇಳಿದರು.
     ಈ ಸಂದರ್ಭದಲ್ಲಿ ಹಿರಿಯರಾದ ಪುಂಡಲೀಕ ನಾಯಕ್‌, ಪುರಸಭಾ ಮಾಜಿ ಅಧ್ಯಕ್ಷ ಮೋಹನ್‌ ದಾಸ್‌ ಶೆಣೆ„, ಪ್ರಧಾನ ಕಾರ್ಯದರ್ಶಿ ರಾಜೇಶ್‌ ಕಾವೇರಿ, ಪುರಸಭೆ ಸದಸ್ಯರಾದ ಸುರೇಶ್‌ ನಾಯಕ್‌, ದಿನಕರ ಕೊತ್ವಾಲ್‌, ಕೋಡಿ ಶೇಖರ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com