ಕುಂದಾಪುರ: ಜನಸಾಮಾನ್ಯರಲ್ಲಿಯೂ ಕಾನೂನು ಪರಿಜ್ಞಾನ, ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ಕಾನೂನು ಸಾಕ್ಷರತಾ ರಥ ಊರೂರು ಸಂಚರಿಸಲಿದೆ. ಕಾನೂನು ಸಾಕ್ಷರತ ರಥದ ಮೂಲಕ ಕಾನೂನು ಸಾಕ್ಷರತೆ ಮೂಡಿಸುವುದು ಮುಖ್ಯ ಧ್ಯೇಯ. ನಾಗರಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದರು.
ಬುಧವಾರ ಇಲ್ಲಿನ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಕುಂದಾಪುರ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ, ಶಿಶು ಅಭಿವದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜೂ. 12ರಿಂದ 14ರ ತನಕ ತಾಲೂಕಿನ ವಿವಿಧ ಸ್ಥಳಗಳಿಗೆ ಸಂಚರಿಸಲಿರುವ ಕಾನೂನು ಸಾಕ್ಷರತಾ ರಥ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ವಿಜೇತ ಪಿಂಕಿ ಡೇಸಾ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶುಭಾ, ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್, ಸಹಾಯಕ ಸರಕಾರಿ ಅಭಿಯೋಜಕ ಹರಿಶ್ಚಂದ್ರ ಉದ್ಯಾವರ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಾಲಕಷ್ಣ ಶೆಟ್ಟಿ, ಉಪಾಧ್ಯಕ್ಷ ಪಿ.ಎಸ್.ರಾವ್, ಕಾರ್ಯದರ್ಶಿ ಕೆ.ಚಂದ್ರಶೇಖರ ಶೆಟ್ಟಿ, ಖಜಾಂಚಿ ಟಿ.ಎಂ.ಪುರಾಣಿಕ್, ಜತೆ ಕಾರ್ಯದರ್ಶಿ ಮಂಜುನಾಥ ಆರ್.ಅರಾಟೆ, ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ, ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ಕವರಿ, ಪಿಎಸ್ಐ ಜಯರಾಮ ಗೌಡ, ಸಂಚಾರಿ ಠಾಣಾಧಿಕಾರಿ ಇಮ್ರಾನ್ ಮತ್ತು ಪರಮೇಶ್ವರಪ್ಪ ಉಪಸ್ಥಿತರಿದ್ದರು.
0 comments:
Post a Comment