ಬ್ರಹ್ಮಾವರಲ್ಲಿ ಜೂ.25-26ಕ್ಕೆ ರಾಜ್ಯ ಮಟ್ಟದ ಹಲಸಿನ ಮೇಳ

ಬ್ರಹ್ಮಾವರ: ಕೃಷಿ ವಿಜ್ಞಾನ ಕೇಂದ್ರ, ವಲಯ ಕೃಷಿ ಸಂಶೋಧನಾ ಕೇಂದ್ರ ಬ್ರಹ್ಮಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತಾಶ್ರಯದಲ್ಲಿ ಜೂ. 25 ಮತ್ತು 26ರಂದು ರಾಜ್ಯ ಮಟ್ಟದ ಹಲಸಿನ ಮೇಳವನ್ನು ಬ್ರಹ್ಮಾವರ ಆಕಾಶವಾಣಿ ಸಮೀಪದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
        ಮೇಳದ ಉದ್ಘಾಟನೆಯನ್ನು ಸಂಸದ ಜಯಪ್ರಕಾಶ್‌ ಹೆಗ್ಡೆ ನೆರವೇರಿಸಲಿದ್ದು, ವಿಶೇಷ ಆಹ್ವಾನಿತರಾಗಿ ಉಡುಪಿ ಶಾಸಕ ಪ್ರಮೋದ್‌ ಮಧ್ವರಾಜ್‌, ಜಿ.ಪಂ. ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಜಿಲ್ಲಾಧಿಕಾರಿ ಡಾ| ಎಂ.ಟಿ. ರೆಜು, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡ್ಗಿ, ತಂಬಾಕು ಮಂಡಳಿ ಮಾಜಿ ಅಧ್ಯಕ್ಷ ಬಿ.ಎನ್‌. ಶಂಕರ್‌ ಪೂಜಾರಿ, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ| ಎಂ. ಹನುಮಂತಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಶರ್ಮಾ, ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್‌ ಮತ್ತಿತರರು ಉಪಸ್ಥಿತರಿರುವರು.
    ಹಲಸಿನ ಮೇಳದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಹಲಸಿನ ಬೆಳೆ, ಭವಿಷ್ಯ ಮತ್ತು ಅವಕಾಶಗಳು, ಹಲಸಿನ ಬೇಸಾಯ ಕ್ರಮ, ನಿರ್ವಹಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನ ಹಾಗೂ ಹಲಸಿನ ಹಣ್ಣಿನ ಮೌಲ್ಯವರ್ಧನೆ, ಖಾದ್ಯಗಳು ಮತ್ತು ಸಂಘ ರಚನೆ ವಿಷಯಗಳ ಬಗ್ಗೆ ವಿಚಾರ ಗೋಷ್ಠಿಯನ್ನು ಏರ್ಪಡಿಸಲಾಗಿದೆ.
     ಮೇಳದಲ್ಲಿ ರಾಜ್ಯಾದ್ಯಂತ ಇರುವ ಹಲಸು ಬೆಳೆಗಾರರು ಹಾಗೂ ಹಲಸಿನ ಮೌಲ್ಯವಧಿರ್ಧಿತ ಉತ್ವನ್ನಗಳ ಮಾರಾಟಗಾರರ ಮಳಿಗೆಗಳಿರುತ್ತಿದ್ದು, ಹೆಚ್ಚು ಹಲಸಿನ ಉತ್ಪನ್ನಗಳು ಮತ್ತು ಉತ್ತಮ ಹಣ್ಣುಗಳಿರುವ ಮಳಿಗೆಗಳನ್ನು ಆರಿಸಿ ಬಹುಮಾನ ವಿತರಿಸಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕಿ ಡಾ| ಜಯಲಕ್ಷ್ಮೀ ಎನ್‌. ಹೆಗಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com