ಸಚಿವ ವಿನಯ ಕುಮಾರ್ ಸೊರಕೆ ಜಿಲ್ಲಾ ಪ್ರವಾಸ

ಉಡುಪಿ: ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಶುಕ್ರವಾರದಿಂದ 3 ದಿನ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
        ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಂಕರಪುರ ವಿಶ್ವಾಸದ ಮನೆ, 10 ಗಂಟೆಗೆ ಫಲಿಮಾರು ಜ್ಯೂನಿಯರ್ ಕಾಲೇಜು, 12 ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಕ್ಷೇತ್ರದ ಸರ್ಕಾರಿ ಪ್ರೌಢಶಾಲೆ ಮುಖ್ಯಸ್ಥರ ಸಭೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ, 3.30ಕ್ಕೆ ಕುಂದಾಪುರ ತಾ.ಪಂ. ಸಭಾಂಗಣದಲ್ಲಿ ಕುಂದಾಪುರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು.
        ಶನಿವಾರ ಬೆಳಗ್ಗೆ 9.30 ಗಂಟೆಗೆ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಉಡುಪಿ ಮತ್ತು ದ.ಕ. ಜಿಲ್ಲಾ ಶಟಲ್ ಟೂರ್ನಮೆಂಟ್ ಮತ್ತು 10 ಗಂಟೆಗೆ ಮಲ್ಪೆ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಕಟ್ಟಡ ಉದ್ಘಾಟಿಸಲಿದ್ದಾರೆ. 11 ಗಂಟೆಗೆ ಕಾಪು ಕೊಪ್ಪಲಂಗಡಿ ಕಮ್ಯುನಿಟಿ ಹಾಲ್‌ನಲ್ಲಿ ಕಾಪು  ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 3.30ಕ್ಕೆ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುವ ಮೋಗವೀರ ಮಹಾಜನ ಸಂಘದ ಕಾರ್ಯಕ್ರಮ, 6 ಗಂಟೆಗೆ ಪಾಂಗಳ ಶ್ರೀಜನಾರ್ದನ ದೇವಸ್ಥಾನದಲ್ಲಿ ಕಾರ್ಯಕರ್ತರ ಸಭೆ ಮತ್ತು ಶಾಲೆ ಮಕ್ಕಳ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
             ಭಾನುವಾರ ಬೆಳಗ್ಗೆ 9 ಗಂಟೆಗೆ ಕಟಪಾಡಿಯ ಆಲಂದಿಕೆರೆ ಉದ್ಘಾಟನೆ, 9.30ಕ್ಕೆ ಕಾಪು ವೀರಭದ್ರ ಕಲ್ಯಾಣ ಮಂಟಪದಲ್ಲಿ ಬಂಟರ ಸಂಘದ ರಕ್ತದಾನ ಶಿಬಿರ ಉದ್ಘಾಟಿಸಲಿದ್ದಾರೆ. 11 ಗಂಟೆಗೆ ಕಾಪು ಪೊಯ್ಯಪೊಡಿಕಲ್ ಗರಡಿಯಲ್ಲಿ ದೇಯಿಬಯ್ಯೆದಿ ಸಹಾಯ ನಿಧಿಯಿಂಧ ಸ್ಕಾಲರ್‌ಶಿಪ್ ವಿತರಣೆ, 12 ಗಂಟೆಗೆ ಪರ್ಕಳ ಹೈಸ್ಕೂಲ್ ಸುವರ್ಣ ಮಹೋತ್ಸವ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಉಡುಪಿ ನ್ಯೂಸಿಟಿ ಹಾಸ್ಪಿಟಲ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಹಾಸ್ಪಿಟಲ್ ವಿದ್ಯಾರ್ಥಿಗಳ ದೀಪ ಪ್ರಜ್ವಲನಾ ಹಾಗೂ ವಾರ್ಷಿಕೋತ್ಸವ ಸಮಾರಂಭ, ಸಂಜೆ 4 ಗಂಟೆಗೆ ಉಡುಪಿ ಶಿರಿಬೀಡು ಸರಸ್ವತಿ ಶಾಲೆ ಆಡಳಿತ ಮಂಡಳಿಯ ಕಾರ್ಯಕ್ರಮ, ಸಂಜೆ 6 ಗಂಟೆಗೆ ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ನಡೆಯುವ ಕಟ್ಟಡ ನಿರ್ಮಾಣ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವರು.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com