ಜೂನ್.19ರಂದು ವಿದ್ಯಾರ್ಥಿ ಸಹಾಯಧನ ವಿತರಣೆ

ಕುಂದಾಪುರ: ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ದತ್ತಿ ನಿಧಿಯಿಂದ ತಾ. 19 ರಂದು ಕುಂದಾಪುರ ಸ.ಪ.ಪೂ. ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ವಿದ್ಯಾರ್ಥಿ ಸಹಾಯ ಧನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ಕಾರ್ಯಕ್ರಮ ಉದ್ಘಾಟಿಸಲಿದ್ಧಾರೆ.
        ಮಧ್ಯಾಹ್ನ 3.30ಕ್ಕೆ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ಣಾಟಕ ಬ್ಯಾಂಕ್‌ ನಿರ್ದೇಶಕ ಡಾ|ಎಚ್‌. ರಾಮಮೋಹನ್‌ ವಹಿಸಲಿದ್ದಾರೆ. ಭಂಡಾರ್‌ಕರ್ ಕಾಲೇಜಿನ ಪ್ರೊ| ಎಸ್‌. ನಾರಾಯಣ ರಾವ್‌ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ.
       ಕುಂದಾಪುರ ತಾಲೂಕಿನವರಾಗಿದ್ದು ಪ್ರೌಢ ಶಾಲೆ, ಪ.ಪೂ. ಕಾಲೇಜು, ಪದವಿ ಕಾಲೇಜು, ಹಾಗೂ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಲಾಗುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯಕ್ರಮವೂ ನಡೆಯಲಿದೆ.
       ಗಿಳಿಯಾರು ಕುಶಲ ಹೆಗ್ಡೆ ಅವರ ಹಿತೆ„ಷಿಗಳು, ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ದತ್ತಿ ನಿಧಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com