ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿಲೋಕ: ಸಮಯ ಪ್ರಜ್ಞೆ ಹಾಗೂ ಜೀವದ ಹಂಗು ತೊರೆದು ಇನ್ನೊಬ್ಬರ ಪ್ರಾಣ ರಕ್ಷಣೆ ಮಾಡಿದ ಬಾಲಕ - ಬಾಲಕಿಯರಿಗೆ 2013ನೇ ಸಾಲಿನ ಮಕ್ಕಳ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
     ಹೊಸದಿಲ್ಲಿಯ ಐಸಿಸಿಡಬ್ಲೂ ಪ್ರಶಸ್ತಿ ನೀಡುತ್ತಿದ್ದು, ಪ್ರಕರಣವು 2012ರ ಜುಲೈ 1ರಿಂದ 2013ರ ಜೂನ್‌ 30ರೊಳಗೆ ನಡೆದಿರಬೇಕು. ಅರ್ಜಿ ಸಲ್ಲಿಸುವವರು 6ರಿಂದ 18 ವರ್ಷದೊಳಗಿನವರಾಗಿರಬೇಕು. ಸಾಧನೆಯ ಕುರಿತು ಪೊಲೀಸ್‌ ಇಲಾಖೆಯ ಪ್ರಥಮ ವರ್ತಮಾನ ವರದಿ, ಪತ್ರಿಕಾ ವರದಿ ಹಾಗೂ ಇತರ ಪೂರಕ ದಾಖಲೆಗಳನ್ನು ನಿಗದಿತ ಅರ್ಜಿ ನಮೂನೆಯೊಂದಿಗೆ ಜುಲೈ 31ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್‌ ಕಟ್ಟಡ, ಕೊಟ್ಟಾರ, ಮಂಗಳೂರು- ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com