ಗಂಗೊಳ್ಳಿ: ಕಳೆದ 2 ವರ್ಷಗಳಿಂದ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೆ ಉತ್ತಮ ಸೇವೆ ನೀಡುತ್ತಿರುವ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲು ಇಲಾಖೆ ಅಧಿಕಾರಿಗಳು ಹುನ್ನಾರ ನಡೆಸುತ್ತಿದ್ದಾರೆ ಎಂದು ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಕುಂದಾಪುರ ಘಟಕದ ಅಧಿಕಾರಿಗಳು ವಿವಿಧ ನೆಪವೊಡ್ಡಿ ಗಂಗೊಳ್ಳಿ- ಕುಂದಾಪುರ ನಡುವೆ ಸಂಚರಿಸುತ್ತಿರುವ ಎರಡು ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟು ಮಾಡುತ್ತಿದ್ದಾರೆ. ಅಲ್ಲದೆ ದಿನಕ್ಕೊಂದು ಬಸ್ ನೀಡಿ ಪ್ರಯಾಣಿಕರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ಕುಂದಾಪುರ ಡಿಪೋ ಮ್ಯಾನೇಜರ್ಗೆ ಹಲವು ಬಾರಿ ವಿನಂತಿಸಿಕೊಳ್ಳಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಇದೇ ರೀತಿ ವರ್ತಿಸಿದರೆ, ಅನಗತ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದರೆ ಗಂಗೊಳ್ಳಿ ನಾಗರಿಕರ ಒಡಗೂಡಿ ಕುಂದಾಪುರ ಘಟಕದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ನಾಗರಿಕ ಹೋರಾಟ ಸಮಿತಿ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಿ. ರಾಘವೇಂದ್ರ ಪೈ ಎಚ್ಚರಿಸಿದ್ದಾರೆ.
0 comments:
Post a Comment