ಉಚಿತ ಪಠ್ಯಪುಸ್ತಕ ವಿತರಣೆ

ಗಂಗೊಳ್ಳಿ: ಇಲ್ಲಿನ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2013-14ನೇ ಶೆ„ಕ್ಷಣಿಕ ವರ್ಷದ ಶಾಲೆ ಪ್ರಾರಂಭೋತ್ಸವ ಸಮಾರಂಭದಲ್ಲಿ ಉಚಿತ ಪಠ್ಯ ಪುಸ್ತಕ ಹಾಗೂ ನೋಟ್‌ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿತು.
   ಶಾಲೆಯ ಮುಖ್ಯಶಿಕ್ಷಕಿ ಉಷಾ ದಿನಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಬಾಬು ಖಾರ್ವಿ ಅವರು ಇಲಾಖೆಯಿಂದ ನೀಡಿದ ಉಚಿತ ಪಠ್ಯಪುಸ್ತಕವನ್ನು ಮಕ್ಕಳಿಗೆ ವಿತರಿಸಿದರು.
     ಅದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಉಷಾದಿನಕರ ತಮ್ಮ ತಂದೆ-ತಾಯಿ ದಿ|ಶಾಂತಾನಂದ, ದಿ| ಸುಶೀಲಾ ಶಾಂತಾನಂದ ಮತ್ತು ತಮ್ಮ ದಿ|ಚಂದ್ರು ಇವರ ಸ್ಮರಣಾರ್ಥ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸುಮಾರು ಐದು ಸಾವಿರ ವೆಚ್ಚದಲ್ಲಿ ನೋಟ್‌ ಪುಸ್ತಕ, ಪೆನ್ನು, ಪೆನ್ಸಿಲ್‌ ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಇಂಗ್ಲೀಷ್‌ ಅರ್ಥಕೋಶವನ್ನು ವಿತರಿಸಿದರು.
     ಸಹಶಿಕ್ಷಕಿ ಚಂದ್ರಕಲಾ ಸ್ವಾಗತಿಸಿದರು. ಸಹಶಿಕ್ಷಕಿ ಪ್ರೇಮಲತಾ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com