ಜಿಲ್ಲೆಯ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸಚಿವರ ಸ್ಪಂದನೆ

ಕುಂದಾಪುರ: ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ದೇಶಪಾಂಡೆಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಶೀಘ್ರ ವೇತನ ಬಿಡುಗಡೆ ಹಾಗೂ ಅತಿಥಿ ಉಪನ್ಯಾಸಕರನ್ನು ಗೌರವಯುತವಾಗಿ ನಡೆಸಿಕೊಳ್ಳುವ ಮತ್ತು ನೇಮಕಾತಿ ಸಂದರ್ಭದಲ್ಲಿ ಪ್ರಾಧಾನ್ಯತೆ ನೀಡುವ ಭರವಸೆ ನೀಡಿದರು.(ಇದೀಗ ರಾಜ್ಯದಲ್ಲಿ ಸುಮಾರು ರೂ. 42 ಕೋಟಿ ಹಾಗೂ ಮಂಗಳೂರು ವಿಭಾಗಕ್ಕೆ ಸುಮಾರು ಮೂರುವರೆ ಕೋಟಿ ಬಿಡುಗಡೆ ಮಾಡಲಾಗಿದೆ.) ಸಂಘದ ಅಧ್ಯಕ್ಷ ವಕ್ವಾಡಿ ರಂಜಿತ್‌ ಕುಮಾರ್‌ ಶೆಟ್ಟಿ, ಜೊತೆ ಕಾರ್ಯದರ್ಶಿ ಪಂಜು ಬಿಲ್ಲವ ಇದ್ದರು. ಬೈಂದೂರು ಶಾಸಕ ಕೆ. ಗೋಪಾಲ್‌ ಪೂಜಾರಿ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com