ಪೋಷಕರ ಆದಾಯದ ಮಿತಿ ಪರಿಷ್ಕರಣೆ

ಉಡುಪಿ: ಕೇಂದ್ರ ಸರ್ಕಾರದ ಆದೇಶದನ್ವಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು 2013-14ನೇ ಶೈಕ್ಷಣಿಕ ಸಾಲಿನಿಂದ 2 ಲಕ್ಷ ರೂಪಾಯಿಗಳಿಂದ 2.50 ಲಕ್ಷ ರೂಪಾಯಿಗಳವರೆಗೆ ಹೆಚ್ಚಿಸಿ, ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನಕ್ಕಾಗಿ 2.50 ಲಕ್ಷ ರೂಪಾಯಿ ಆದಾಯ ಮಿತಿಯಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ದೂರವಾಣಿ-0820-2574 892, ಉಡುಪಿ ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ 0820-2528884, ಕುಂದಾಪುರ 08254-234609, ಕಾರ್ಕಳ 08258-232133 ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com