ವನಮಹೋತ್ಸವ ಆಚರಣೆ

ಬೈಂದೂರು: ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಮತ್ತು ಅರಣ್ಯ ಇಲಾಖೆ ಬೈಂದೂರು ಇವರ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಸುಮಾರು 500 ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಸಂರಕ್ಷಿಸಲಾಯಿತು ಅಲ್ಲದೇ ಪ್ರತಿಯೊಬ್ಬ ವಿದ್ಯಾರ್ಥಿಗೂ ಕೂಡ ಒಂದೊಂದು ಗಿಡಗಳನ್ನು ವಿತರಿಸಲಾಯಿತು.
         ವಲಯ ಅರಣ್ಯಾಧಿಕಾರಿಗಳಾದ ಬ್ರಿಜೇಶ ವಿನಯಕುಮಾರ ಇವರು ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಉದ್ಘಾಟಿಸಿ, ಮನುಕುಲದ ಪ್ರಗತಿಗೆ ಪರಿಸರದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವನಮಹೋತ್ಸವದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಅನಿಲ್ ಕುಮಾರ್ ರವರು ಉಪಸ್ಥಿತರಿದ್ದರು.
      ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಘು ನಾಯ್ಕ ಸ್ವಾಗತಿಸಿ, ಅರುಣ್ ಕುಮಾರ ನಿರೂಪಿಸಿದರು, ಡಾ| ಉಮೇಶ ಮಯ್ಯ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com