ಪಿಎಚ್‌ಡಿ ಪದವಿ ಅಧ್ಯಯನಕ್ಕೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಅಂಗಸಂಸ್ಥೆಯಾದ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರವು ಪಿಎಚ್‌ಡಿ ಅಧ್ಯಯನಕ್ಕಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದೊಂದಿಗೆ ಮಾನ್ಯತೆ ಪಡೆದಿದ್ದು,  2013-14ನೇ ಸಾಲಿನ ಅಧ್ಯಯನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
        ಸ್ನಾತಕೋತ್ತರ ಪದವಿಯಲ್ಲಿ 55ಶೇಕಡಾಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳು ಕನ್ನಡ, ಮತ್ತು ಚರಿತ್ರೆ  ವಿಷಯಗಳಲ್ಲಿ ಅಧ್ಯಯನ ಮಾಡಲು ಅವಕಾಶವಿದೆ. ನಿಗದಿತ ಅರ್ಜಿ ಶುಲ್ಕ  500 ರೂಪಾಯಿ, ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ  50 ಶೇಕಡಾ ಶುಲ್ಕ ವಿನಾಯಿತಿ ಇದೆ. ಆಸಕ್ತರು ವಿಶ್ವವಿದ್ಯಾಲಯದ ವೆಬ್ ಸೈಟ್  ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
     ಅರ್ಜಿ ಸಲ್ಲಿಸಲು ಇದೇ 25 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗೆ 0820-2521159 ಸಂಪರ್ಕಿಸಬಹುದು ಎಂದು ಕೇಂದ್ರದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com