ಮಕ್ಕಳ ಸಾಹಿತ್ಯ ದತ್ತಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಉಡುಪಿ: ವಿ.ಗೌರಮ್ಮ ಗಂಗಾಧರಯ್ಯ ಮಕ್ಕಳ ಸಾಹಿತ್ಯ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು 10ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.
       2012ನೇ ಸಾಲಿನಲ್ಲಿ ಪ್ರಕಟವಾದ ಡಾ. ಜಚನಿ ಸಮೀಕ್ಷೆ ಹಾಗೂ ಸಾಹಿತ್ಯ ಕುರಿತು ಬರೆದ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಬಹುದು. ಪ್ರತಿ ಪ್ರವೇಶಕ್ಕೆ ಮೂರು ಪುಸ್ತಕಗಳನ್ನು ಕಳುಹಿಸಬೇಕು, ಸ್ಪರ್ಧೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ, ಒಂದಕ್ಕಿಂತ ಹೆಚ್ಚು ಪುಸ್ತಕಗಳು ಅತ್ಯುತ್ತಮವೆಂದು ಪರಿಗಣಿಸಿದರೆ ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗಿರುತ್ತದೆ, ತೀರ್ಪುಗಾರರ ಶಿಫಾರಸ್ಸು ಅಂತಿಮವಾಗಿದೆ.
      ಪುಸ್ತಕಗಳನ್ನು ಕಳುಹಿಸಲು ಆಗಸ್ಟ್ 30ಕೊನೆಯ ದಿನಾಂಕ. ಪುಸ್ತಕಗಳನ್ನು  ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-2662 3584 ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com