ಆನ್‌ಲೈನ್‌ ಮೂಲಕವೂ ಪಾಸ್‌ಪೋರ್ಟ್‌ಗೆ ಅರ್ಜಿ ಸಾಧ್ಯ

ಅರ್ಜಿದಾರರು ತಮ್ಮ ಸ್ಮಾರ್ಟ್‌ಫೋನ್‌ ಮೂಲಕ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ದಿನಗಳು ಇನ್ನು ಹೆಚ್ಚು ದೂರವಿಲ್ಲ.
       ಅರ್ಜಿದಾರರು ಇ ಪಾಸ್‌ಪೋರ್ಟ್‌ ಸೇವಾ ವ್ಯವಸ್ಥೆ ಮೂಲಕ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಪಾಸ್‌ಪೋರ್ಟ್‌ ಸೇವಾ ಯೋಜನೆಯ ಜಂಟಿ ಕಾರ್ಯದರ್ಶಿ ಹಾಗೂ ಮುಖ್ಯ ಪಾಸ್‌ಪೋರ್ಟ್‌ ಅಧಿಕಾರಿ ಮುಕ್ತೇಶ್‌ ಕುಮಾರ್‌ ಪರ್ದೇಶಿ ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಖಾತೆ ಕಳೆದ ಮಾರ್ಚ್‌ನಲ್ಲಿ ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತ್ತು.
ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್ಲೆಟ್‌ ಹೊಂದಿರುವವರು http://www.passportindia.gov.in/ ನಿಂದ ಅರ್ಜಿಯನ್ನು ಡೌನ್‌ಲೋಡ್‌ ಮಾಡಬಹುದಾಗಿದೆ. ಈ ವ್ಯವಸ್ಥೆ ಮೂಲಕ ಪಾಸ್‌ಪೋರ್ಟ್‌ ಅರ್ಜಿಯ ಸ್ಥಿತಿ, ಪತ್ತೆ, ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳ ಪತ್ತೆ ಮತ್ತು ಪಾಸ್‌ಪೋರ್ಟ್‌ ಪಡೆಯುವಲ್ಲಿನ ವಿವಿಧ ಹಂತಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ.
      ಈ ವರ್ಷದ ಅಂತ್ಯದೊಳಗೆ 85 ಲಕ್ಷಕ್ಕೂ ಅಧಿಕ ಪಾಸ್‌ಪೋರ್ಟ್‌ಗಳನ್ನು ವಿತರಿಸಲಾಗುವ ನಿರೀಕ್ಷೆಯಿದೆ ಎಂದು ಪರ್ದೇಶಿ ತಿಳಿಸಿದರು. ಕಳೆದ ವರ್ಷ 74 ಲಕ್ಷ ಪಾಸ್‌ಪೋರ್ಟ್‌ಗಳನ್ನು ವಿತರಿಸಲಾಗಿತ್ತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com