ಅನ್ನಭಾಗ್ಯ ಯೋಜನೆಗೆ ಚಾಲನೆ

ಬೈಂದೂರು: ಕಡುಬಡವರ ಉದ್ಧಾರವೇ ನಮ್ಮ ಸರ್ಕಾರದ ಮುಖ್ಯ  ಉದ್ಧೇಶ, ಹಾಗಾಗಿ ಪ್ರತಿಯೊಬ್ಬ ಬಿಪಿಎಲ್ ಕಾರ್ಡುದಾರರಿಗೆ ತಿಂಗಳಿಗೆ ಮೂವತ್ತು ಕೆ.ಜಿ ಅಕ್ಕಿ ಕೇವಲ ಮೂವತ್ತು ರೂಪಾಯಿಗೆ ಸಿಗುವಂತೆ ಅನ್ನಭಾಗ್ಯ ಯೋಜನೆ ಜಾರಿಗೆ ಇಂದಿನಿಂದ ಬರಲಿದೆ. ಜನರ ಕಷ್ಟಕ್ಕೆ ಸ್ಪಂದಿಸುವುದೇ ಜನಪ್ರತಿನಿಧಿಗಳ ಮೊದಲ ಕರ್ತವ್ಯ, ಅದಕ್ಕೆ ಅಧಿಕಾರಿಗಳ ಸಹಕಾರವೂ ಬೇಕಾಗಿದೆ. ಬೈಂದೂರನ್ನು ಆದಷ್ಟು ಶೀಘ್ರದಲ್ಲಿ ಹೊಸತಾಲೂಕಾಗಿ ಘೋಷಿಸುವುದಷ್ಟೇ ಅಲ್ಲದೆ ಪುರಸಭೆಯನ್ನಾಗಿ ಮಾಡಲು ಪ್ರಾಮಾಣಿಕವಾದ ಪ್ರಯತ್ನವನ್ನು ಶಾಸಕರೊಂದಿಗೆ ಸೇರಿ ಮಾಡುತ್ತೇನೆ’ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯಕುಮಾರ ಸೊರಕೆ ಹೇಳಿದರು.
        ಬೈಂದೂರು ರೋಟರಿ ಭವನದಲ್ಲಿ ಏರ್ಪಡಿಸಿದ್ದ  ಅನ್ನಭಾಗ್ಯ ಯೋಜನೆಯ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಬೈಂದೂರು ಶಾಸಕರಾದ ಗೋಪಾಲ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಟಿ.ಎಂ.ರೇಜು, ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್, ಜಿಲ್ಲಾ ಪಂಚಾಯತ್ ಸದಸ್ಯೆ ಸುಪ್ರೀತಾ ದೀಪಕ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ರಾಜು ಪೂಜಾರಿ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧಾ ಪೂಜಾರಿ, ಜಿಲ್ಲಾ ಪಂಚಾಯತ್ ಅಧಿಕಾರಿಗಳು , ಕುಂದಾಪುರ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹೊಸ ಬಿಪಿಎಲ್ ಕಾರ್ಡುದಾರರಿಗೆ ಕಾರ್ಡನ್ನು ವಿತರಿಸಲಾಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com