ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ರಾಜೇಶ್‌ ಕಾವೇರಿ ಆಯ್ಕೆ

ಕುಂದಾಪುರ: ಕುಂದಾಪುರ ವಿಧಾನಸಬಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ರಾಜೇಶ್‌ ಕಾವೇರಿ ಅವರು ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಅವರು ಘೋಷಿಸುವ ಮೂಲಕ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದರು.
       ಜಿಲ್ಲಾ ಬಿಜೆಪಿ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
 ಹಿರಿಯ ಬಿಜೆಪಿ ನಾಯಕರಾದ ಪುಂಡಲೀಕ ನಾಯಕ್‌, ಶಿವರಾಮ ಉಡುಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ಲಾ ಸಿಯಾಲ್‌, ಹಿಂದುಳಿದವರ ಘಟಕದ ಅಧ್ಯಕ್ಷ ಗೋಪಾಲ ಬಳಂಜ, ಯುವ ಮೋರ್ಚಾ ಅಧ್ಯಕ್ಷ ಶಂಕರ ಅಂಕದಕಟ್ಟೆ , ಪುರಸಭಾ ಮಾಜಿ ಅಧ್ಯಕ್ಷ ಮೋಹನದಾಸ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
ಕಿಶೋರ್‌ ಕುಮಾರ್‌ ಸ್ವಾಗತಿಸಿದರು. ಮಾಲಿನಿ ಸತೀಶ್‌ ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com