ಜು.17ರಂದು ಬಸ್‌ ಬಂದ್‌

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಸಿಟಿ, ಸರ್ವಿಸ್‌ ಹಾಗೂ ಎಕ್ಸ್‌ಪ್ರೆಸ್‌ ಬಸ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಸ್‌ ಕಾರ್ಮಿಕರು ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು. 17ರಂದು ಬಸ್‌ ಬಂದ್‌ ನಡೆಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಾರ್ಮಿಕ ಪರಿಷತ್‌ ಬಸ್‌ ನೌಕರರ ಸಂಘದ ಪ್ರಕಟನೆ ತಿಳಿಸಿದೆ.
       ಬಸ್‌ ಕಾರ್ಮಿಕರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಮಾಲಕರಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಿರ್ಲಕ್ಷ  ಧೋರಣೆ ಅನುಸರಿಸಲಾಗಿದೆ. ಬಂದ್‌ಗೆ ನೌಕರ ವರ್ಗದ ಎಲ್ಲ ಸಂಘಟನೆಗಳು ಬೆಂಬಲ ಸೂಚಿಸಿದೆ ಎಂದು ಸಂಘದ ಅಧ್ಯಕ್ಷ ಐವನ್‌ ಡಿ'ಸೋಜಾ, ಉಪಾಧ್ಯಕ್ಷ ರವಿ ಕುಕ್ಯಾನ್‌, ಪ್ರಧಾನ ಕಾರ್ಯದರ್ಶಿ ಕೃಷ್ಣ ಡಿ. ಅಂಚನ್‌, ಖಜಾಂಚಿ ಜೆ.ಡಿ. ಅಪ್ಪು ಸ್ವಾಮಿ, ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com