ಜಿಲ್ಲಾ ಪ.ಪೂ. ಕಾಲೇಜ್ ಸಂಘದ ಪದಾಧಿಕಾರಿಗಳ ಆಯ್ಕೆ

ಉಡುಪಿ: ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಘದ 2013- 14 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಾಲಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್.ಬಿ. ನಾಯಕ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಬೆಳ್ಮಣ್ನ ಸೈಂಟ್ ಮೇರಿಸ್ ಪಿ.ಯು. ಕಾಲೇಜಿನ ಪ್ರಾಂಶುಪಾಲ ಫಾದರ್ ಪೌಲ್ ಸಿಕ್ವೇರಾ, ನಿಟ್ಟೆಯ ಎನ್.ಎಸ್.ಎ.ಎಮ್. ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಇಂದಿರಾ, ಬೈಂದೂರು ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಟಿ. ಪಾಲಾಕ್ಷ, ಕಾರ್ಯದರ್ಶಿಯಾಗಿ ಮಲ್ಪೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮೇಟಿ ಮುದಿಯಪ್ಪ, ಜೊತೆ ಕಾರ್ಯದರ್ಶಿಯಾಗಿ ಹೆಜಮಾಡಿ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ರಮೇಶ್, ಖಜಾಂಚಿಯಾಗಿ ಉದ್ಯಾವರ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮೋಹನನ್, ಪರೀಕ್ಷಾ ಸಂಚಾಲಕರಾಗಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗೇಶ್ ಶಾನುಭೋಗ್, ಕ್ರೀಡಾ ಸಂಚಾಲಕರಾಗಿ ಬ್ರಹ್ಮಾವರ ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸ್ವಲ್ವದೋರ್ ನರೋನ್ಹ, ಸಾಂಸ್ಕೃತಿಕ ಸಂಚಾಲಕರಾಗಿ ಕೊಲ್ಲೂರು ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ, ಕಾರ್ಯಕ್ರಮ ಸಂಚಾಲಕರಾಗಿ ಕಾರ್ಕಳ ನೆಲ್ಲಿಕಟ್ಟೆಯ ಜ್ಞಾನಗಂಗಾ ಪಿ.ಯು. ಕಾಲೇಜಿನ ಪ್ರಾಂಶುಪಾಲ ಯು.ಎಲ್. ಭಟ್ ಹಾಗೂ ಕುಂದಾಪುರ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ಆಯ್ಕೆಯಾದರು.
ಸದಸ್ಯರಾಗಿ ಉಡುಪಿ ಪೂರ್ಣಪ್ರಜ್ಞ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಾಮದಾಸ ಆರ್ಯ, ಕೋಡಿ - ಕನ್ಯಾನ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಾರುತಿ, ಸಾಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್, ಕಾರ್ಕಳ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ದೇವರಾಜ್, ಶಿರ್ಲಾಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾಸ್ತ್ರಿ. ಎ., ಕುಂದಾಪುರ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ.ಎಂ. ಗೊಂಡ, ಕಾರ್ಕಳ ಕೆ.ಎಂ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ನೆಲ್ಲಿಕಾರ್, ಬಸ್ರೂರು ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಶೆಟ್ಟಿ, ಉಡುಪಿ ಮಹೇಶ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಹರಿಪ್ರಸಾದ್ ಆಯ್ಕೆಯಾಗಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com