ಕನ್ನಡ ವಿಜ್ಞಾನ ಪುಸ್ತಕಗಳಿಗೆ ಪುರಸ್ಕಾರ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ 2009ರಿಂದ ಶ್ರೇಷ್ಠ ಲೇಖಕ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದೆ.

ಪ್ರಶಸ್ತಿಗೆ ಕೃಷಿ ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಲೇಖಕರಿಗೆ 25,000 ರೂ. ನೀಡಿ ಗೌರವಿಸಲಾಗುವುದು.

2013ರಲ್ಲಿ ಮೇಲ್ಕಂಡ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಸಲ್ಲಿಸಬಹುದಾಗಿದೆ. ಲೇಖಕರು ನಿಗದಿತ ಅರ್ಜಿಗಳನ್ನು ನಮೂನೆಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಮುಂದಿನ ಜನವರಿ 4ರೊಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ವಿಭಾಗ, 24/2, 21ನೇ ಮುಖ್ಯ ರಸ್ತೆ, ಬಿಡಿಎ ಕಾಂಪ್ಲೆಕ್ಸ್‌ ಹತ್ತಿರ, ಬನಶಂಕರಿ 2ನೇ ಹಂತ, ಬೆಂಗಳೂರು- 560070 ವಿಳಾಸಕ್ಕೆ ಕಳುಹಿಸಬೇಕು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com