ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಕುಂದಾಪುರ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಾಳಾವರ- ಅಸೋಡು `ಬಿ' ಇದರ ಸಹಬಾಗಿತ್ವದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕಾಳಾವರ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶಾಮ್ ರಾಜ್ ಭಟ್ ಕಾರ್ಯಕ್ರಮ ಉಧ್ಘಾಟಿಸಿದರು. ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ವೆಂಕಟೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷ ಸಂದೀಪ ಶೆಟ್ಟಿಗಾರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಸದಸ್ಯ ದೀಪಕ್ ಕುಮಾರ್ ಶೆಟ್ಟಿ, ಕಾಳಾವರ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಉಪಸ್ಥಿತರಿದ್ದರು. ಒಕ್ಕೂಟದ ಜೊತೆ ಕಾರ್ಯದರ್ಶಿ ರಾಜ್ ಶೇಖರ್ ಸ್ವಾಗತಿಸಿದರು.  ಸೇವಾ ಪ್ರತಿನಿಧಿ ಶೇಖರ್ ದೇವಾಡಿಗ ನಿರೂಪಿಸಿದರು. ದಾಖಲಾತಿ ಸದಸ್ಯ ಸತೀಶ್ ದೇವಾಡಿಗ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com