ಗಂಗೊಳ್ಳಿಯಲ್ಲಿ ಸಸಿಗಳ ವಿತರಣೆ

ಗಂಗೊಳ್ಳಿ: ನಮ್ಮ ದೇಶದಲ್ಲಿ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕಾಡುಗಳು ನಾಶವಾಗಿ ನಾಡುಗಳ ನಿರ್ಮಾಣವಾಗುತ್ತಿದೆ. ಪ್ರಕೃತಿ ನಾಶದಿಂದ ಮನುಷ್ಯನ ಜೀವನವೂ ನಾಶವಾಗಲಿದ್ದು, ಪರಿಸರ ಸಂರಕ್ಷಣೆ ಮಾಡಬೇಕಾದುದು ನಮ್ಮೆಲ್ಲರ ಹೊಣೆಯಾಗಿದೆ. ಹೀಗಾಗಿ ಪ್ರತಿಯೊಂದು ಮನೆಯಲ್ಲಿ ಪ್ರತಿವರ್ಷ ಒಂದೊಂದು ಸಸಿಗಳನ್ನು ನೆಟ್ಟು ಅದನ್ನು ಬೆಳೆಸಿ ನಮ್ಮ ಪರಿಸರವನ್ನು ಉಳಿಸುವ ಇಂತಹ ಕಾರ್ಯ ಶ್ಲಾಘನೀಯವಾದುದು ಎಂದು ಜಿ.ಬಸವರಾಜು ಪೇಟೆಮನೆ ಹೇಳಿದರು.
   ಅವರು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲ್‍ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ (ಹ.ವೇ) ಶಾಲಾ ವಠಾರದಲ್ಲಿ ಸ್ಥಳೀಯ ಶ್ರೀ ಬಬ್ಬುಸ್ವಾಮಿ ಸ್ವಯಂಸೇವಾ ಸಂಘದ ವತಿಯಿಂದ ಜರಗಿದ ಸಸಿಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀ ಬಬ್ಬುಸ್ವಾಮಿ ಸ್ವಯಂಸೇವಾ ಸಂಘದ ಅಧ್ಯಕ್ಷ ಜಗದೀಶ ಗಂಗೊಳ್ಳಿ ಅವರು ಶಾಲಾ ಮಕ್ಕಳಿಗೆ ಮತ್ತು ವಿವಿಧ ಸಂಘಟನೆಗಳ ಸದಸ್ಯರಿಗೆ ಸಸಿಗಳನ್ನು ವಿತರಿಸಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ರಮೇಶ ಮಹಾಲೆ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಭಾಸ್ಕರ ಎಚ್.ಜಿ., ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com