ಪ್ರೌಢಶಾಲಾ ಕನ್ನಡ ಅಧ್ಯಾಪಕರಿಗೆ ಕಾರ್ಯಾಗಾರ

ಕೋಟ: ಜಿಲ್ಲಾ ಪ್ರೌಢಶಾಲಾ ಕನ್ನಡ ಅಧ್ಯಾಪಕರ ಸಂಘ, ಮಣೂರು ಗೀತಾನಂದ ಫೌಂಡೇಶನ್ ಮತ್ತು ಬ್ರಹ್ಮಾವರ ಸಹಶಿಕ್ಷಕರ ಸಂಘದ ಆಶ್ರಯದಲ್ಲಿ ಪ್ರೌಢಶಾಲಾ ಕನ್ನಡ ಅಧ್ಯಾಪಕರಿಗೆ ವಿಷಯ ಸಂಪದೀಕರಣ ಕಾರ್ಯಾಗಾರವನ್ನು ಇದೇ 27ರಂದು ಬೆಳಿಗ್ಗೆ 10ಗಂಟೆಗೆ ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ಏರ್ಪಡಿಸಲಾಗಿದೆ.

ಉದ್ಯಮಿ ಆನಂದ ಸಿ ಕುಂದರ್ ಕಾರ್ಯಾಗಾರವನ್ನು ಉದ್ಘಾಟಿಸುವರು. ಶಿಕ್ಷಣಾಧಿಕಾರಿ ಆಶೋಕ್ ಕಾಮತ್ ಅಧ್ಯಕ್ಷತೆ ವಹಿಸುವರು. ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಹಾಬಲೇಶ್ವರ ರಾವ್, ಚಂದ್ರಶೇಖರ ಕೆದ್ಲಾಯ, ರಂಗ ನಿರ್ದೇಶಕ ಶ್ರೀಪಾದ ಭಟ್, ಮುನಿರಾಜ ರೆಂಜಾಳ ಪಾಲ್ಗೊಳ್ಳುವರು ಎಂದು ಸಂಘದ ಕಾರ್ಯದರ್ಶಿ ಗಣೇಶ್ ಮೂರ್ತಿ ಹೆಬ್ಬಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com