ನಕ್ಸಲ್‌ ಪೀಡಿತ ಗ್ರಾಮಗಳ ಅಭಿವೃದ್ಧಿಗೆ ನೆರವು: ಸಚಿವ ರಮಾನಾಥ ರೈ

ಕುಂದಾಪುರ: ನಕ್ಸಲ್‌ ಪ್ರದೇಶದಲ್ಲಿ ಅರಣ್ಯ ಇಲಾಖೆ ಈಗಾಗಲೇ ಗ್ರಾಮ ಅರಣ್ಯ ಸಮಿತಿಯನ್ನು ರಚಿಸಿದ್ದು, ಈ ಪ್ರದೇಶದ ಜನಸಾಮಾನ್ಯರಿಗೆ ನೆರವು ನೀಡುವ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಸ್ವಸಹಾಯ ಸಂಘಗಳ ಮೂಲಕ ನೆರವೇರಿಸಲಾಗುತ್ತದೆ ಎಂದು ರಾಜ್ಯ ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
         ನಕ್ಸಲ್‌ ಪ್ರದೇಶದಲ್ಲಿ ಅರಣ್ಯ ಇಲಾಖೆಯಡಿ ಬರುವ ವಿವಿಧ ಕಾರ್ಯಕ್ರಮಗಳಿಡಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಸಹಾಯಗಳಿಗೆ, ಅರಣ್ಯ ಸಮಿತಿಗಳಿಗೆ ವಿವಿಧ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುವುದಲ್ಲದೇ ಈ ಪ್ರದೇಶಗಳ ಅಭಿವೃದ್ಧಿಯಲ್ಲಿ ಇಲಾಖೆ ಕೈ ಜೋಡಿಸಲಿದೆ ಎಂದು ಅವರು ಹೇಳಿದರು.

ಕುಗ್ರಾಮಗಳಿಗೆ ವಿದ್ಯುತ್‌
      ಕುಂದಾಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ವಿದ್ಯುತ್‌ ಸಂಪರ್ಕದಿಂದ ವಂಚಿತವಾದ ಅನೇಕ ಕುಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ನೀಡುವ ಬಗ್ಗೆ ಯಾವ ಕ್ರಮತೆಗೆದುಕೊಳ್ಳಲಾಗುವುದು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿಯಲ್ಲಿ ಹಾಗೂ ಸುಪ್ರಿಂಕೋರ್ಟನ ಆದೇಶದದಡಿಯಲ್ಲಿ ಇಲಾಖೆ ಕಾರ್ಯ ನಿರ್ವಹಣೆಯನ್ನು ಮಾಡಬೇಕಾಗುತ್ತದೆ. ಆದರೆ ಜನಸಾಮಾನ್ಯರಿಗೆ ನೆರವು ನೀಡುವ ನೀಡುವ ದೃಷ್ಟಿಯಿಂದ ಕಾನೂನಿನ ಚೌಕಟ್ಟಿನಲ್ಲಿ ಇಲ್ಲಿನ ಪ್ರದೆಶಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಇರುವ ಅವಕಾಶವನ್ನು ಬಳಿಸಿಕೊಳ್ಳಲಾಗುವುದು. ಮತ್ತು ಇತರ ಇಲಾಖೆಗಳ ಸಮನ್ವಯತೆಯೊಂದಿಗೆ ಈ ಬಗ್ಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ದೈವೀವನ ಉದ್ಘಾಟನೆ -ಮಾಹಿತಿ ಇಲ್ಲ
     ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಬಡಾಬಾಳು ಸಮೀಪದ ಬಾಳ್ಕಟ್‌ ಶ್ರೀ ಮೂಕಾಂಬಿಕಾ ದೈವಿವನ ಅಭಿವೃದ್ಧಿ ಉದ್ಘಾಟನೆಯನ್ನು ಮಂಗಳವಾರ ಅರಣ್ಯ ಸಚಿವರು ನೆರವೇರಿಸಬೇಕಾಗಿತ್ತು. ಆದರೆ ಈ ಉದ್ಘಾಟನೆಯನ್ನು ಯಾವ ಕಾರಣದಿಂದ ಮುಂದೂಡಲಾಗಿದೆ ಎಂದು ಪ್ರಶ್ನಿಸಿದಾಗ, ಉದ್ಘಾಟನೆ ಬಗ್ಗೆ ಈ ಹಿಂದೆ ನಿರ್ಧರಿಸಲಾಗಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಆದರೆ ಈ ಬಗ್ಗೆ ಮಾಹಿತಿ ತನಗಿಲ್ಲ ಎಂದರು.
    ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ.ಸಿಂಗ್‌, ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಶಾಂತಪ್ಪ, ಪ್ರಬಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಶೆಟ್ಟಿ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com