ಮರವಂತೆ ಪ್ರೌಢಶಾಲೆ: ವಿವೇಕಾನಂದ ಜನ್ಮವರ್ಷಾಚರಣೆ

ಕುಂದಾಫುರ:   ಯಳಜಿತ್ ಗ್ರಾಮದ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮಜಯಂತಿ ವರ್ಷಾಚರಣೆ ಮತ್ತು ವಿದ್ಯಾರ್ಥಿಗಳಿಗೆ ವಿವೇಕಾನಂದರ ಕುರಿತ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಮರವಂತೆಯ ನೇತಾಜಿ ಸುಭಾಸ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯಲ್ಲಿ ಆಗಸ್ಟ್ 28ರಂದು ಜರಗಿತು.
    ಶಾಲಾ ಹಿರಿಯ ಶಿಕ್ಷಕಿ ಜಯಶೀಲಾ ನಾಯಕ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಾಮಿ ವಿವೇಕಾನಂದರ ದಿವ್ಯ ಸಂದೇಶಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮೌಲಿಕ ಪರಿಣಾಮವನ್ನು ಮಾಡಬಲ್ಲ ಶಕ್ತಿಯನ್ನು ಹೊಂದಿವೆ. ಶಿಕ್ಷಕ ಸಮುದಾಯದಲ್ಲಿಯೂ ವಿವೇಕಾನಂದರ ವಿಚಾರಗಳ ಜಾಗೃತಿಯ ಆವಶ್ಯಕತೆ ಇದೆ ಎಂದರು. ಮುಖ್ಯ ಅತಿಥಿ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಸಂಚಾಲಕ ಮಂಗೇಶ್ ಶೆಣೈ ಅವರು ವಿಶೇಷ ಉಪನ್ಯಾಸ ನೀಡಿದರು. 
    ಸಹಶಿಕ್ಷಕರಾದ ದೀಪಾ ಬಾಡ್ಕರ್, ಪಾಟೇಲ್ ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.
    ಸಹಶಿಕ್ಷಕಿ ಮಹೇಶ್ವರಿ ಹಿರೇಮಠ್ ಅವರು ಸ್ವಾಗತಿಸಿದರು. ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಯಶೋಧಾ ಕರನಿಂಗ ಅವರು ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com