ಗಂಗೊಳ್ಳಿ: ವಿವಿಧೆಡೆ ವರಮಹಾಲಕ್ಷ್ಮೀ ವೃತ ಆಚರಣೆ

ಸ್ಥಳೀಯ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ಆಶ್ರಯದಲ್ಲಿ 23ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಆಚರಣೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ನಡೆಯಿತು. ಜಿಎಸ್‍ಬಿ ಸಮಾಜದ ಸುಮಂಗಲಿಯರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ವೃತದ ಅಂಗವಾಗಿ ಶ್ರೀದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳು ಜರಗಿದವು.


ಸ್ಥಳೀಯ ಇಂದುಶ್ರೀ ಮಹಿಳಾ ಸಂಘ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಆಚರಣೆಯು ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ ಮುಖ್ಯ ಅರ್ಚಕ ಪಾಂಡುರಂಗ ಅವರ ನೇತೃತ್ವದಲ್ಲಿ ಜರಗಿತು.




ಗಂಗೊಳ್ಳಿಯ ಮಲ್ಯರಬೆಟ್ಟುವಿನ ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಆಚರಣೆಯು ಮುಖ್ಯ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಇವರ ನೇತೃತ್ವದಲ್ಲಿ ಜರಗಿತು.


ಕಂಚುಗೋಡು ಶ್ರೀ ರಾಮ ಮಂದಿರದಲ್ಲಿ ಸಮಾಜದ ಸುಮಂಗಲಿಯರಿಂದ ಶ್ರೀ ವರಮಹಾಲಕ್ಷ್ಮೀ ವೃತ ಆಚರಣೆಯು ಜರಗಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com