ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಚಿತ್ತೂರು ವಲಯದ ಆಲೂರು-ಹರ್ಕೂರು ಒಕ್ಕೂಟಗಳ ನೇತೃತ್ವದಲ್ಲಿ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಸಾರ್ವಜನಿಕ ಸ್ವಚ್ಛತಾ ಕಾರ್ಯಕ್ರಮವನ್ನು ಅ.15ರಂದು ಆಯೋಜಿಸಲಾಗಿತ್ತು. ಆಸ್ಪತ್ರೆಯ ವಠಾರದಲ್ಲಿ ಬೆಳೆದ ಹಾನಿಕಾರಕ ಗಿಡಗಳನ್ನು ತೆರೆವುಗೊಳಿಸುವ ಮೂಲಕ 80ಕ್ಕೂ ಹೆಚ್ಚು ಮಂದಿ ಸದಸ್ಯರು ವಿಶಿಷ್ಠವಾಗಿ ಸ್ವಾತಂತ್ರ್ಯೋತ್ಸವ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ.ಡಾ| ರೂಪ ಪೈ, ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ, ಸತೀಶ್ ಕುಲಾಲ್ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ಮಹೇಶ್ ಆರ್. ಪ್ರಾಸ್ತಾವಿಕ ಮಾತನಾಡಿ, ವಲಯದ ನಾಲ್ಕು ಕಡೆಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಜಡ್ಕಲ್, ಮಾರಣಕಟ್ಟೆ, ಮುದೂರುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಸೇವಾ ಪ್ರತಿನಿಧಿ ಚಂದ್ರಾವತಿ ಕಾರ್ಯಕ್ರಮ ನಿರ್ವಹಿಸಿ, ಸೇವಾಪ್ರತಿನಿಧಿ ಪೂರ್ಣಿಮಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಶ್ಯಾಮಲ ವಂದಿಸಿದರು.
0 comments:
Post a Comment