ವಿವೇಕಾನಂದ ಜನ್ಮವರ್ಷಾಚರಣೆ

ಕುಂದಾಪುರ:   ಯಳಜಿತ್ ಗ್ರಾಮದ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮಜಯಂತಿ ವರ್ಷಾಚರಣೆ ಮತ್ತು ವಿದ್ಯಾರ್ಥಿಗಳಿಗೆ ವಿವೇಕಾನಂದರ ಕುರಿತ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
    ಶಾಲಾ ಮುಖ್ಯಶಿಕ್ಷಕ ಕೆ. ಗೋಪಾಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಕಲಿಕೆಯಲ್ಲಿ ಉನ್ನತಿಯನ್ನು ಸಾದಿಸಲು ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶಗಳು ಸದಾ ಮಾರ್ಗದರ್ಶಿಯಾಗಿವೆ ಎಂದರು. ಮುಖ್ಯ ಅತಿಥಿ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಸಂಚಾಲಕ ಮಂಗೇಶ್ ಶೆಣೈ ಅವರು ವಿಶೇಷ ಉಪನ್ಯಾಸ ನೀಡಿದರು. ಸಹಶಿಕ್ಷಕರಾದ ವಿನೋದಿನಿ, ಜ್ಯೋತಿ ಹಾಗೂ ಚಿತ್ರಾ ಮೊದಲಾದವರು ಉಪಸ್ಥಿತರಿದ್ದರು.
    ದೈಹಿಕ ಶಿಕ್ಷಣ ಶಿಕ್ಷಕ ಸುಂದರ ಶೆಟ್ಟಿ ಅವರು ಸ್ವಾಗತಿಸಿದರು. ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಸೀತಾ ಅವರು ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com