ತಗ್ಗರ್ಸೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಬೈಂದೂರು:  ಸಾರ್ವಜನಿಕ ಶಿಕ್ಷಣ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾದಿಕಾರಿ ಕಚೇರಿಯ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
      ಮುಖ್ಯ ಅತಿಥಿ ಉದ್ಯಮಿ ಟಿ. ನಾರಾಯಣ ಹೆಗ್ಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೆಚ್ಚಿನ ಉತ್ತೇಜನ ಅಗತ್ಯ ಎಂದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಗಾಣಿಗ ಅವರು ಅಧ್ಯಕ್ಷತೆ ವಹಿಸಿದ್ದರು.
   ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೆಂಕಟ ಪೂಜಾರಿ, ಸದಸ್ಯ ನಾರಾಯಣ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ವಲಯಾಧ್ಯಕ್ಷ ಮಹದೇವ ಮಂಜ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ಪೂಜಾರಿ ಮಯ್ಯಾಡಿ, ಸಿಆರ್‍ಪಿ ರಾಮಕೃಷ್ಣ, ಸಿಆರ್‍ಪಿ ಗಣಪತಿ ಹೋಬಳಿದಾರ್, ಎಸ್‍ಡಿಎಂಸಿ ಸದಸ್ಯರು, ಸಹಶಿಕ್ಷಕಿಯರಾದ ಭಾಗೀರಥಿ, ಅಂಬಾಬಾಯಿ, ಚೈತ್ರ ಮತ್ತು ಅಕ್ಷತಾ ಹಾಗೂ ಹಳೆವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.
   ಇತ್ತೀಚೆಗೆ ನಿಧನರಾದ ಶಾಲಾ ಮುಖ್ಯಶಿಕ್ಷಕ ಸಂಜೀವ ನಾಗೂರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಈ ಸಂದರ್ಭದಲ್ಲಿ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.
    ಎಸ್‍ಡಿಎಂಸಿ ಅಧ್ಯಕ್ಷ ರಾಜೀವ ಹುದಾರ್ ಅವರು ಸ್ವಾಗತಿಸಿದರು. ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ರಾಜು ಪೂಜಾರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಜ್ಯೋತಿ ಎಚ್. ಅವರು ಕಾರ್ಯಕ್ರಮ ನಿರ್ವಹಿಸಿದರು. ಪ್ರಭಾರ ಮುಖ್ಯಶಿಕ್ಷಕಿ ನಾಗರತ್ನ ಅವರು ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com