ಪದೋನ್ನತಿಗೊಂಡ ವೈದ್ಯಾಧಿಕಾರಿಗಳಿಗೆ ವಿದಾಯ

ವಂಡ್ಸೆ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಇದೀಗ ಜಿಲ್ಲಾ ಆರ್.ಪಿ.ಎಚ್ ಆಗಿ ಪದೋನ್ನತಿ ಪಡೆದ ಡಾ|ಎಂ.ಜಿ ರಾಮ ಅವರನ್ನು ಬೀಳ್ಕೊಡುವ ಕಾರ್ಯಕ್ರಮ ಇತ್ತೀಚೆಗೆ ವಂಡ್ಸೆ ಗ್ರಾಮ ಪಂಚಾಯತ್ ಆಯೋಜಿಸಿತ್ತು.
     ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಪದೋನ್ನತಿ ಹೊಂದಿ ಬೇರೆ ಉಡುಪಿಗೆ ತೆರಳುತ್ತಿರುವ ವೈದ್ಯಾಧಿಕಾರಿಯವರನ್ನು ಸನ್ಮಾನಿಸಿದರು. ತಾಲೂಕು ಪಂಚಾಯತ್ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ನಾರಾಯಣ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಸದಸ್ಯರಾದ ಸಂಜೀವ ಪೂಜಾರಿ, ಗಿರಿಜಾ, ಶಿಕ್ಷಕ ಶಶಿಧರ ಶೆಟ್ಟಿ, ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೆಸರ ವಿ.ಕೆ ಶಿವರಾಮ ಶೆಟ್ಟಿ, ಹಾಲು ಉತ್ಪಾದಕರಸಹಕಾರ ಸಂಘದ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಹರ್ಷವರ್ಧನ ಹೆಗ್ಡೆ, ರಿಕಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಶೆಟ್ಟಿ ಸ್ವಾಗತಿಸಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಂಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.



ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com