ಅಂತರ್ ಕಾಲೇಜು ಹಿಂದಿ ಪ್ರಬಂಧ ಸ್ಪರ್ಧೆ

ಉಡುಪಿ: ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವತಿಯಿಂದ ಹಿಂದಿ ದಿನಾಚರಣೆಯ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಹಿಂದಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಭಾಷಾ ಕೀ ದೀವಾರ್ ಕೇ ಆರ್ ಪಾರ್ ಹಮ್‌ಸಬ್ ಭಾರತೀಯ ಹೈ ಎಂಬ ವಿಷಯದಡಿ ವಿದ್ಯಾರ್ಥಿಗಳು ಎ4 ಹಾಳೆಯಲ್ಲಿ 4 ಪುಟಗಳಿಗೆ ಮೀರದಂತೆ ಬರೆದಿರುವ ಪ್ರಬಂಧವನ್ನು ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಆ. 24ರೊಳಗಾಗಿ ಮುಖ್ಯಸ್ಥರು, ಹಿಂದಿ ವಿಭಾಗ, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿ- 576101 ಇಲ್ಲಿಗೆ ಕಳುಹಿಸಿಕೊಡಬೇಕು. ಪ್ರತಿ ಕಾಲೇಜಿನಿಂದ ಒಬ್ಬ ವಿದ್ಯಾರ್ಥಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಎಂಬುದಾಗಿ ತಿಳಿಸಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com