ಮಾನಸಿಕ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಿ: ಡಾ|ಪ್ರಾಣದೇವ್‌

ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಕುಂಭಾಶಿಯ ಪ್ರಸಿದ್ಧ ಆರ್ಯುವೇದ ತಜ್ಞ ಡಾ|ಪ್ರಾಣದೇವ್‌ ಅವರು ಭೇಟಿ ನೀಡಿ ಶಾಲಾ ಮಕ್ಕಳಿಗೆ ಆರ್ಯುವೇದದ ಬಗ್ಗೆ ಮಾಹಿತಿ ನೀಡಿದರು.
    ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ದುಶ್ಚಟಗಳಿಂದ ದೂರವಿರಬೇಕು,
   ದೈನಂದಿನ ಚಟುವಟಿಕೆಗಳಲ್ಲಿ ಕ್ರಮಬದ್ಧತೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಜೊತೆಗೆ ಸಹನೆ, ನಿಸ್ವಾರ್ಥತೆ ಮತ್ತು ಸಹಾಯಹಸ್ತದ ಗುಣಗಳನ್ನು ಅಳವಡಿಸಬೇಕು ಎಂದು ತಿಳಿಹೇಳಿದರು.
      ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಶರಣಕುಮಾರ ಮತ್ತು ಶೆ„ಕ್ಷಣಿಕ ಸಲಹೆಗಾರ ಶ್ರೀನಿವಾಸ ಮೂರ್ತಿ ಅವರು ಉಪಸ್ಥಿತರಿದ್ದರು.
      ಕಾರ್ಯಕ್ರಮವನ್ನು ಶಿಕ್ಷಕರಾದ ರಾಮ ದೇವಾಡಿಗ ನಿರೂಪಿಸಿದರು ಹಾಗೂ ಪ್ರಾಂಶುಪಾಲ ಶರಣಕುಮಾರ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com