ಸ್ವಾಮಿ ವಿವೇಕಾನಂದ ಜನ್ಮವರ್ಷಾಚರಣೆ

ಕಂಬದಕೋಣೆ: ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಾಗೂ ಜೀವನಾನುಭವಗಳನ್ನು ಪಡೆದುಕೊಳ್ಳುವಲ್ಲಿ ಎಡವದಂತೆ ಶಿಕ್ಷಕರು ಮತ್ತು ಹಿರಿಯರು ಹೆಚ್ಚಿನ ಎಚ್ಚರವನ್ನು ವಹಿಸಬೇಕಾಗಿದೆ. ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಾದರ್ಶಗಳ ಅಧ್ಯಯನದಿಂದ ವಿದ್ಯಾರ್ಥಿಗಳ ಮಾನಸಿಕ ಶಕ್ತಿ ಜಾಗೃತಗೊಳ್ಳಲು ಸಾಧ್ಯ ಎಂದು ಉಡುಪಿ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಯು. ಚಂದ್ರಶೇಖರ ಹೊಳ್ಳ ಅವರು ಹೇಳಿದರು.
   ಯಳಜಿತ್‍ನ ಶ್ರೀ ಸಿದ್ಧಿವಿನಾಯಕ ಸಾಂಸ್ಕಂತಿಕ ಕೇಂದ್ರದ ಆಶ್ರಯದಲ್ಲಿ ಕಂಬದಕೋಣೆಯ ಸಂದೀಪನ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಜರಗಿದ ಸ್ವಾಮಿ ವಿವೇಕಾನಂದರ 150ನೇ ಜನ್ಮಜಯಂತಿ ವರ್ಷಾಚರಣೆಯ ಅಂಗವಾಗಿ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ವತಿಯಿಂದ ಉಚಿತವಾಗಿ ಕೊಡಮಾಡಲಾದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಅವರು ಮಾತನಾಡಿದರು. 
   ಶಾಲಾ ಮುಖ್ಯಶಿಕ್ಷಕ ಬಿ. ವಿಶ್ವೇಶ್ವರ ಅಡಿಗ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಲ್ಲಿ ಜೀವನಮೌಲ್ಯಗಳ ಅರಿವು ಮೂಡಿಸುವಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆ ಉಪಯುಕ್ತವಾಗಿದೆ ಎಂದರು. ಮುಖ್ಯ ಅತಿಥಿ ಸಿದ್ಧಿವಿನಾಯಕ ಸಾಂಸ್ಕಂತಿಕ ಕೇಂದ್ರದ ಸಂಚಾಲಕ ಮಂಗೇಶ್ ಶೆಣೈ ಅವರು ಸ್ವಾಮಿ ವಿವೇಕಾನಂದರ ಜೀವನ ತತ್ವಸಂದೇಶಗಳ ಕುರಿತು ಉಪನ್ಯಾಸ ನೀಡಿ ಶ್ರದ್ಧೆ, ಏಕಾಗ್ರತೆ, ಮಾನಸಿಕ ನಿಯಂತ್ರಣದಿಂದ ಉತ್ತಮ ಸಾದನೆ ಮಾಡಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 
   ವಿದ್ಯಾರ್ಥಿ ಸುಕೃತ್ ಅವರು ಸ್ವಾಗತಿಸಿದರು. ಕಾರ್ಯಕ್ರಮದ ನಿರ್ದೇಶಕ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ವಿವೇಕಾನಂದರ ಕುರಿತು ರಚಿಸಿದ ಓ ಅನಂತಶಕ್ತಿಯೇ ಗೀತೆಯನ್ನು ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿದರು. ಶಿಕ್ಷಕ ನಾಗೇಶ್ ಅವರು ವಂದಿಸಿದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com