ಮಾಜಿ ಪ್ರಧಾನಿ ದೇವೇಗೌಡರಿಂದ ಕೊಲ್ಲೂರಲ್ಲಿ ವಿಶೇಷ ಪೂಜೆ

ಕೊಲ್ಲೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಸೋಮವಾರ ರಾತ್ರಿ ಕೊಲ್ಲೂರಿಗೆ ಆಗಮಿಸಿದ್ದು, ಮಂಗಳವಾರ ಬೆಳಗ್ಗೆ ಶ್ರೀಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
   ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ತಮ್ಮ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥನೆ ಸಲ್ಲಿಸುವುದಕ್ಕಾಗಿ ಕೊಲ್ಲೂರಿಗೆ ಆಗಮಿಸಿ ಮೂಕಾಂಬಿಕಾ ದೇವಿಯ ದರ್ಶನ ಪಡೆಯುತ್ತಿರುವುದಾಗಿ ಅವರು ತಿಳಿಸಿದರು.
     ರಾಜ್ಯಾದ್ಯಂತ ಜೆಡಿಎಸ್ ಸಂಘಟಿಸುವ ಕಾರ್ಯಕ್ರಮ ಮಂಗಳವಾರದಿಂದ ಆರಂಭಿಸಲಾಗುತ್ತಿದೆ. 4 ಹಂತದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ನಡೆಸಿ, ಕಾರ್ಯಕರ್ತರನ್ನು ಭೇಟಿಯಾಗುತ್ತೇನೆ. ತನ್ನೊಂದಿಗೆ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಪಕ್ಷದ ಇತರ ನಾಯಕರು ಭಾಗವಹಿಸಲಿದ್ದಾರೆ ಎಂದವರು ದೇವೇಗೌಡ ತಿಳಿಸಿದರು.
 ಈ ಸಂದರ್ಭ ದೇವೇಗೌಡರೊಂದಿಗೆ ಮಾಜಿ ಸಚಿವ ವಸಂತ ಸಾಲ್ಯಾನ್ ಮತ್ತು ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಇದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com