ಸೆ.25.ಅತಿಥಿ ಉಪನ್ಯಾಕಸರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಮನವಿ

ಕುಂದಾಪುರ: ಕರ್ನಾಟಕ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಒಕ್ಕೂಟ,  ಭಾರತ ಪ್ರಜಾಸತ್ತಾತ್ಮಾಕ ಯುವಜನ ಫೆಡರೇಷನ್ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವಂತೆ ರಾಜ್ಯಾದಾದ್ಯಂತ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರತಿಭಟನಾ ಮನವಿ ಸೆ.25 ರಂದು ಉಡುಪಿಯಲ್ಲಿ ನಡೆಯಲಿದೆ.
    ಕೇವಲ ಅತಿಥಿ ಉಪನ್ಯಾಸಕರ ಬೇಡಿಕೆಯಷ್ಟೇ ಅಲ್ಲ. ಸರ್ಕಾರಿ ಕಾಲೇಜುಗಳ ಉಳಿವಿಗಾಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಉಳಿವಿಗಾಗಿ ನಡೆಸುವ ಹೋರಾಟ ಇದಾಗಿದ್ದು, ಸರ್ಕಾರಿ ಪದವಿ ಕಾಲೇಜು ಇಲಾಖೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳಿದ್ದು, ಕೇವಲ 10600 ಅತಿಥಿ ಉಪನ್ಯಾಸಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದೆ. ಹಲವಾರು ವರ್ಷಗಳಿಂದ  ಯಾವುದೇ ಸೇವಾ ಭದ್ರತೆ ಇಲ್ಲದೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಪ್ರತಿ ತಿಂಗಳು ವೇತನ, ಕಾಲೇಜುಗಳಲ್ಲಿ ಅತ್ಯಾಧುನಿಕ ಮೂಲಭೂತ ಸೌಕರ್ಯ ನೀಡಿ   ಗುಣಮಟ್ಟದ  ಉನ್ನತ ಶಿಕ್ಷಣ ಎಲ್ಲರಿಗೂ ದೊರೆಯುವಂತಾಗಬೇಕು. ಅತಿಥಿ ಉಪನ್ಯಾಸಕರು,  ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಈ ಹೋರಾಟಕ್ಕೆ ಬೆಂಬಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com