ಎಚ್‌.ಎಂ.ಎಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಹಿತ್ಯ ಉತ್ಸವ

ಕುಂದಾಪುರ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳು ಅನಾವರಣಗೊಳ್ಳಬೇಕಾದರೆ ಸೂಕ್ತವಾದ ಪರಿಸರ ಶಾಲೆಯಲ್ಲಿ ನಿರ್ಮಾಣವಾಗಬೇಕು. ಈ ನಿಟ್ಟಿನಲ್ಲಿ ಇಲ್ಲಿನ ಅಧ್ಯಾಪಕ ವೃಂದ ಹೊಸ ಹೊಸ ಚಿಂತನೆಗಳ ಮೂಲಕ ಮಕ್ಕಳಿಗೆ ವೇದಿಕೆಗಳನ್ನು ಒದಗಿಸುತ್ತಿದೆ ಎಂದು ಕೋಟೇಶ್ವರ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಅಡಿಗ ಹೇಳಿದರು.
      ಅವರು ಕುಂದಾಪುರದ ಎಚ್‌.ಎಂ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿದ ಲಿಟರರಿ ಫೆಸ್ಟಿವಲ್‌ನ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
       ಇನ್ನೋರ್ವ ಅತಿಥಿ ನಾರಾಯಣ ಶೆಟ್ಟಿ ಮಾತನಾಡಿ, ಪ್ರತಿ ವಿದ್ಯಾರ್ಥಿಗೂ ಅವಕಾಶ ಕಲ್ಪಿಸು ಉದ್ದೇಶದಿಂದ ಹಮ್ಮಿಕೊಂಡ ಕಾರ್ಯಕ್ರಮಗಳನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
      ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್‌, ರ್ಸರಿ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ. ಭಟ್‌ ಉಪಸ್ಥಿತರಿದ್ದರು.
 ವಿದ್ಯಾರ್ಥಿನಿ ಧವಳಶ್ರೀ ಸ್ವಾಗತಿಸಿದರು. ಸನತ್‌ ವಂದಿಸಿದರು. ಸ್ನೇಹಾ ಮತ್ತು ವೀಕ್ಷಿತ್‌ ಪರಿಚಯಿಸಿ, ಶ್ರೀಮಾ ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com