ಅ. 5ರಿಂದ ಕೊಲ್ಲೂರಿನಲ್ಲಿ ನವರಾತ್ರಿ ಉತ್ಸವ

ಕೊಲ್ಲೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ. 5ರಿಂದ ಅ. 14ರ ತನಕ ನಡೆಯುವ ನವರಾತ್ರಿ ಉತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲತೆಗಾಗಿ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ ಹೇಳಿದ್ದಾರೆ.

ದೇವಳದ ಪರಿಸರದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುವಲ್ಲಿ ಪೊಲೀಸ್‌ ವರಿಷ್ಠರು ಕ್ರಮ ಕೈಗೊಳ್ಳಲಿದ್ದು ವಾಹನ ಸಂಚಾರ ಹಾಗೂ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕೆಂದು ತೆರಳುವ ಭಕ್ತರಿಗೆ ಅಲ್ಲಿನ ಪರಿಸರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದರೊಡನೆ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗುವುದು. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ವಿದ್ಯಾರಂಭ, ರಥೋತ್ಸವ

ಅಕ್ಟೋಬರ್‌ 13ರ ಮಧ್ಯಾಹ್ನ 'ನವರಾತ್ರಿಯ ರಥೋತ್ಸವ' ನಡೆಯಲಿದ್ದು ಅ. 14ರಂದು ಬೆಳಗ್ಗೆ ನಡೆಯುವ ವಿದ್ಯಾರಂಭಕ್ಕಾಗಿ ವಿವಿಧ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಸರಸ್ವತಿ ಮಂಟಪದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅರ್ಚಕರನ್ನು ನಿಯೋಜಿಸಲಾಗುವುದು ಎಂದು ಕಾರ್ಯ ನಿರ್ವಹಣಾಧಿಕಾರಿ ಎಲ್‌.ಎಸ್‌. ಮಾರುತಿ ತಿಳಿಸಿದ್ದಾರೆ.

ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ ಐತಾಳ್‌, ಉಪ ಕಾರ್ಯನಿರಾÌಹಣಾಧಿಕಾರಿ ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com