ಬೈಂದೂರು ಶಿಕ್ಷಕರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ: ಶಾಸಕ ಭರವಸೆ

ಬೈಂದೂರು ವಲಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು.
ನಾಗೂರು:   ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸುಸಜ್ಜಿತ ನೂತನ ಕಟ್ಟಡಕ್ಕೆ ಅನುದಾನವನ್ನು ಒದಗಿಸುವುದಾಗಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಭರವಸೆಯನ್ನು ನೀಡಿದ್ದಾರೆ.

   ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಸೆಪ್ಟಂಬರ್ 5ರಂದು ಜರಗಿದ ಬೈಂದೂರು ವಲಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಂದೂರು ಶಿಕ್ಷಕರ ಬಹುಕಾಲದ ಬೇಡಿಕೆಯಾದ ಶಿಕ್ಷಕರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕಾಗಿ ಕ್ಷೇತ್ರ ಸಂಸದರಿಗೆ ಮನವಿ ಮಾಡಲಾಗಿದೆ. ವ್ಯಾಪ್ತಿಯ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ. ಶಾಸಕರ ನಿಧಿಯಿಂದ ಅಗತ್ಯವಾದ ಹೆಚ್ಚಿನ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಶಿಕ್ಷಕರಿಗೆ ಸಮರ್ಪಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.
    ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಬಳಿಕ ಮುಖ್ಯ ಅತಿಥಿ ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಮತಾ ಆರ್. ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಬೈಂದೂರು ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಅನಿಲ್‍ಕುಮಾರ್ ಅವರು ಪ್ರಧಾನ ಭಾಷಣ ಮಾಡಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ. ಬಾಬು ಶೆಟ್ಟಿ, ಗೌರಿ ದೇವಾಡಿಗ, ಇಂದಿರಾ ಶೆಟ್ಟಿ ಹರ್ಕೂರು, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ, ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಾಜು ಪೂಜಾರಿ, ಗೋಪಾಲಕೃಷ್ಣ ಕಲಾಮಂದಿರದ ಮಾಲಕ ಮಂಜುನಾಥ ಉಡುಪ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವ ಮಂಜ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಜಿ. ಎಸ್. ಭಟ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೀರ್ತಿಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ಎಸ್, ಮಯ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.
ಸೇವೆ ಸಲ್ಲಿಸಿ ನಿವೃತ್ತರಾದ ಹಾಗೂ ವಿಶೇಷ ಸಾಧನೆಗೈದ ಶಿಕ್ಷಕರನ್ನು ಸನ್ಮಾನಿಸಲಾಯಿತು. 

    ಸೇವೆ ಸಲ್ಲಿಸಿ ನಿವೃತ್ತರಾದ ಹಾಗೂ ವಿಶೇಷ ಸಾಧನೆಗೈದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ಆಕಸ್ಮಿಕವಾಗಿ ಮೃತರಾದ ತಗ್ಗರ್ಸೆ ಶಾಲಾ ಮುಖ್ಯಶಿಕ್ಷಕ ಸಂಜೀವನಾಗೂರು ಮತ್ತು ಅರಾಟೆ ಶಾಲಾ ಶಿಕ್ಷಕ ಪ್ರಕಾಶ್ ನಾಯಕ್ ಅವರಿಗೆ ಈ ಸಂದರ್ಭದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಅವರು ಸ್ವಾಗತಿಸಿದರು. ತಲ್ಲುರು ಸಿಆರ್‍ಪಿ ಗಣಪತಿ ಹೋಬಳಿದಾರ್ ಮತ್ತು ಬಿಆರ್‍ಪಿ ಸತ್ಯನಾ ಕೊಡೇರಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಚಂದ್ರಶೇಖರ್ ಶೆಟ್ಟಿ ವಂದಿಸಿದರು.
     
ಚಿತ್ರ ವರದಿ: ಚಂದ್ರ ಕೆ. ಹೆಮ್ಮಾಡಿ
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com