ವಿದ್ಯಾರ್ಥಿ ವೇತನ ವಿತರಣೆ

ಉಪ್ಪುಂದ: ಉಪ್ಪುಂದದ ಯು. ಎನ್. ಐತಾಳ್ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಅಲ್ಲಿನ 'ಗಣೇಶ ಪ್ರಸಾದ'ದಲ್ಲಿ ನಡೆಯಿತು. ಸಂದೀಪನ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಬಿ. ವಿಶ್ವೇಶ್ವರ ಅಡಿಗ ಅಧ್ಯಕ್ಷತೆ ವಹಿಸದ್ದರು. ಕೂಟ ಮಹಾಜಗತ್ತಿನ ಕೇಂದ್ರ ಘಟಕದ ಅಧ್ಯಕ್ಷ ವೆಂಕಟ ರಾವ್ ಮುಖ್ಯ ಅತಿಥಿಗಳಾಗಿದ್ದರು. 
     ವಿವಿಧ ಹಂತಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಐದು ಲಕ್ಷಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು. 'ಆರೋಗ್ಯ ಭಾಗ್ಯ' ಯೋಜನೆಯಡಿ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ನೆರವು ನೀಡಲಾಯಿತು. 
     ಯು. ವಿ. ಐತಾಳ್ ಸ್ವಾಗತಿಸಿ, ನಿರೂಪಿಸಿದರು. ಟ್ರಸ್ಟ್ ಅಧ್ಯಕ್ಷ ಯು. ಎನ್. ಐತಾಳ್ ಟ್ರಸ್ಟ್ ವತಿಯಿಂದ ಇನ್ನೂ ಹೆಚ್ಚಿನ ಸೇವೆ ನೀಡುವ ಚಿಂತನೆ ಇದೆ ಎಂದರು. ಸುನಿಲ್ ಹೊಳ್ಳ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com