ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಆಯ್ಕೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಆಯ್ಕೆಯಾಗಿದ್ದಾರೆ. ಕಳೆದ 3 ಜಿಲ್ಲಾಧ್ಯಕ್ಷರ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ತಿಂಗಳೆ, ರಾಜ್ಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರಾದ ಅಧ್ಯಕ್ಷರಾಗಿದ್ದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಿರ್ಗಮನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ನೂತನ ಜಿಲ್ಲಾಧ್ಯಕ್ಷಗೆ ಅಭಿನಂದನೆ ಸಲ್ಲಿಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಶ್ಯಾಮಲಾ ಕುಂದರ್ ಆಯ್ಕೆಯಾಗಿರುವುದನ್ನು ಅವರು ಪ್ರಕಟಿಸಿದರು.
ಬಿಜೆಪಿ ಗೆಲವಿಗೆ ಆದ್ಯತೆ: ಈ ಸಂದರ್ಭ ನೂತನ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ತಮ್ಮ ಆದ್ಯತೆಯಾಗಲಿದೆ. ಕಾರ್ಯಕರ್ತರ ಬೆಂಬಲ, ಹಿರಿಯರ ಮಾರ್ಗದರ್ಶನದಲ್ಲಿ ಮತ್ತೆ ಪಕ್ಷ ಬಲಿಷ್ಠಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಮಾಜಿ ಸಚಿವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಪು ಮಾಜಿ ಶಾಸಕ ಲಾಲಾಜಿ ಮೆಂಡನ್, ಶ್ಯಾಮಲಾ ಕುಂದರ್, ಮಟ್ಟಾರು ರತ್ನಾಕರ ಹೆಗ್ಡೆ, ಗೀತಾಂಜಲಿ ಸುವರ್ಣ, ರವಿ ಅಮಿನ್, ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್ ಇದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com