ಸೋಲು ಗೆಲುವಿನ ಜಿಜ್ಞಾಸೆಯಿಂದ ಹೊರಬನ್ನಿ:ನಿವೃತ್ತ ಪ್ರಾಚಾರ್ಯ ಪ್ರೊ| ದೋಮ ಚಂದ್ರಶೇಖರ್‌

ಕುಂದಾಪುರ: ವಿದ್ಯಾರ್ಥಿ ಜೀವನ ಶಾಲೆಗೆ ಸೇರ್ಪಡೆಗೊಂಡ ನಂತರ ಆರಂಭವಾಗುದಲ್ಲ ಅದು ಹುಟ್ಟಿನಿಂದಲೇ ಆರಂಭವಾಗುತ್ತದೆ. ನಮ್ಮ ಸುತ್ತಮುತ್ತಲ ಪರಿಸರ ಒಂದಲ್ಲ ಒಂದು ನೆಲೆಯಲ್ಲಿ ನಮ್ಮ ಮೇಲೆ ಪ್ರಭಾವ ಬೀರುತ್ತದೆ. ಕಲಿಕೆ ಎನ್ನುವುದು ಸಹಜ ಪ್ರಕ್ರಿಯೆ. ವಿದ್ಯಾರ್ಥಿಗಳು ಬಹುಮುಖೀ ನೆಲೆಯಲ್ಲಿ ಕಲಿಕೆಯ ಪ್ರವೃತ್ತಿಗೆ ತೆರೆದುಕೊಳ್ಳಬೇಕು ಎಂದು ಭಂಡಾರ್‌ಕಾರ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ| ದೋಮ ಚಂದ್ರಶೇಖರ್‌ ಹೇಳಿದರು.
   ಅವರು ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಆರ್‌.ಎನ್‌. ಶೆಟ್ಟಿ ಪ.ಪೂ. ಕಾಲೇಜಿನ ನೂತನ ಸಭಾಂಗಣದಲ್ಲಿ ವಿದ್ಯಾರ್ಥಿ ಬದುಕಿನ ಪಯಣ ಎಂಬ ವಿಷಯದ ಕುರಿತು ಉಪನ್ಯಾಸಕ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಕಾಲೇಜಿನ ಸಂಚಾಲಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸೀಮಾ ಪಿ. ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಚೇತನ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ಉಪನ್ಯಾಸಕಿ ಶ್ರೀದೇವಿ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com