ಸೆ.11ರಿಂದ ಹಾಲಿನ ದರ ಹೆಚ್ಚಳ

ಬೆಂಗಳೂರು: ಗೌರಿಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಸೆ.11ರಿಂದ ರಾಜ್ಯದಲ್ಲಿ 'ನಂದಿನಿ' ಹಾಲಿನ ದರದಲ್ಲಿ ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳ ಆಗುವುದು ಬಹುತೇಕ ಖಚಿತವಾಗಿದೆ. ಆ ಮೂಲಕ, ಗ್ರಾಹಕರಿಗೆ ಮತ್ತೂಮ್ಮೆ ದರ ಏರಿಕೆ ಶಾಕ್‌ ನೀಡಲು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ನಿರ್ಧರಿಸಿದೆ.

ನಗರದಲ್ಲಿ ಸೋಮವಾರ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ದರದಲ್ಲಿಯೂ ಲೀಟರ್‌ಗೆ 2 ರೂ. ಹೆಚ್ಚಳ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಆದರೆ, ಸಭೆಗೆ ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಗೈರು ಹಾಜರಾಗಿದ್ದರು. ಹೀಗಾಗಿ, ಎಲ್ಲ ಬಗೆಯ ಹಾಲಿನ ಮೇಲೆ ದರ ಹೆಚ್ಚಳ ಮಾಡಬೇಕೆ ಅಥವಾ ಟೋನ್‌x ಹಾಲಿನ ಬೆಲೆಯಲ್ಲಿ ಮಾತ್ರ ಹೆಚ್ಚಳ ಮಾಡಬೇಕೆ ಎನ್ನುವ ಕುರಿತು ಇನ್ನೂ ಅಂತಿಮ ತೀರ್ಮಾನ ಆಗಿಲ್ಲ.

ಕೆಎಂಎಫ್ ಮೂಲಗಳ ಪ್ರಕಾರ, ಹಾಲಿನ ದರ ಹೆಚ್ಚಳದ ವಿಷಯ ಸೂಚಿ ಸಭೆ ಮುಂದಿರಲಿಲ್ಲ. ಆದರೆ, ಈಗಾಗಲೇ ತೈಲ ಬೆಲೆಯಲ್ಲಿ ಭಾರೀ ಏರಿಕೆಯಾಗಿರುವುದರಿಂದ ಕೆಎಂಎಫ್ಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಹಾಲಿನ ದರ ಹೆಚ್ಚಳ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಭೆಯು ಪ್ರತಿ ಲೀಟರ್‌ ಹಾಲಿಗೆ 2 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಸೆ.11ರಿಂದ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ಕೆಎಂಎಫ್ ನಿರ್ದೇಶಕರೊಬ್ಬರು ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com