ಸ್ವಾಮಿ ವಿವೇಕಾನಂದ ಜನ್ಮವರ್ಷಾಚರಣೆ

ಸಿದ್ದಾಪುರ: ವಿದ್ಯಾರ್ಥಿಗಳಿಗೆ ಭಾರತೀಯ ಇತಿಹಾಸ, ಸನಾತನ ಪರಂಪರೆ, ಆಧ್ಯಾತ್ಮ ಹಾಗೂ ಸಾಂಸ್ಕøತಿಕ ಮೌಲ್ಯಗಳ ಕುರಿತು ಉಪಯಕ್ತ ಮಾರ್ಗದರ್ಶನ ನೀಡುವುದು ಇಂದಿನ ಅಗತ್ಯವಾಗಿದೆ. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರಗಳನ್ನು ಕಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳ ಅರಿವು ನೀಡುವುದು ಅತ್ಯಂತ ಸೂಕ್ತ ಎಂದು ಸಿದ್ದಾಪುರದ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಕಾಮತ್ ಡಿ. ಅವರು ಹೇಳಿದರು.
  ಸ್ವಾಮಿ ವಿವೇಕಾನಂದರ 150ನೇ ಜನ್ಮಜಯಂತಿ ವರ್ಷಾಚರಣೆಯ ಅಂಗವಾಗಿ ಯಳಜಿತ್‍ನ ಶ್ರೀ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯಲ್ಲಿ ಸೆಪ್ಟಂಬರ್ 12ರಂದು ಜರಗಿದ ವಿಶೇಷ ಉಪನ್ಯಾಸ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
  ಮುಖ್ಯ ಅತಿಥಿ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಸಂಚಾಲಕ ಮಂಗೇಶ್ ಶೆಣೈ ಅವರು ಸ್ವಾಮಿ ವಿವೇಕಾನಂದರ ಜೀವನ ತತ್ವಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಆಂಧ್ರ ಬ್ಯಾಂಕ್ ನಿವೃತ್ತ ಮೆನೇಜರ್ ರತ್ನಾಕರ ನಾಯಕ್, ಶಾಲಾ ಆಡಳಿತ ಮಂಡಳಿ ಸದಸ್ಯ ದೇವದಾಸ್ ಭಟ್ ಉಪಸ್ಥಿತರಿದ್ದರು. ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ವತಿಯಿಂದ ಉಚಿತವಾಗಿ ಕೊಡಮಾಡಲಾದ ಪುಸ್ತಕಗಳನ್ನು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.  
  ಶಾಲಾ ಮುಖ್ಯಶಿಕ್ಷಕಿ ಕೃಷ್ಣವೇಣಿ ಅವರು ಸ್ವಾಗತಿಸಿದರು. ಕಾರ್ಯಕ್ರಮದ ನಿರ್ದೇಶಕ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ರೇಷ್ಮಾ ಶೆಟ್ಟಿ ಅವರು ವಂದಿಸಿದರು. 
 ಚಿತ್ರ: ಇದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com