ನಿವೃತ್ತ ಶಿಕ್ಷಕ ಚಂದ್ರಯ್ಯ ಆಚಾರ್‌ ಗೆ ಸಮ್ಮಾನ, ಬೀಳ್ಕೊಡುಗೆ

ಶಂಕರನಾರಾಯಣ: ಸೇವೆಯಿಂದ ನಿವೃತ್ತರಾದ ಶಂಕರನಾರಾಯಣದ ಸ.ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಯ್ಯ ಆಚಾರ್‌ ಅವರನ್ನು ಇತ್ತೀಚೆಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದ ಮತ್ತು ಎಸ್‌.ಡಿ.ಎಂ.ಸಿ. ಜಂಟಿಯಾಗಿ ಆಯೋಜಿಸಿದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸಮ್ಮಾನಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ರವಿ ಕುಲಾಲ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶಂಕರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಲಕ್ಷ್ಮೀನಾರಾಯಣ ಉಡುಪ ಸಮ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀ ವೀರ ಕಲ್ಲುಕುಟಿಕ ದೈವಸ್ಥಾನದ ಮೊಕ್ತೇಸರ ಮಂಜುನಾಥ ಶೇಟ್‌ ಅವರು ಸರಕಾರದಿಂದ ಕೊಡಮಾಡಿದ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಕೃಷ್ಣ ಶೇಟ್‌, ಗ್ರಾ.ಪಂ. ಸದಸ್ಯ ಸದಾಶಿವ ಶೆಟ್ಟಿಯವರು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಚೆಕ್‌ ವಿತರಿಸಿದರು. ಸಿ.ಆರ್‌.ಪಿ. ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ವೈ. ಉದಯ ಕುಮಾರ ಶೆಟ್ಟಿ ಸ್ವಾಗತಿಸಿ, ಸಹಶಿಕ್ಷಕಿ ಗೀತಾ ವಂದಿಸಿದರು. ವತ್ಸಲಾ ರಾವ್‌ ಕಾರ್ಯಕ್ರಮ ನಿರೂಪಿಸಿದರು. ಶೋಭಾ, ಭಾಗ್ಯಲಕ್ಷ್ಮೀ, ಗೌರವ ಶಿಕ್ಷಕಿ ದೀಪಾ ಕಾರ್ಯಕ್ರಮಕ್ಕೆ ಸಹಕರಿಸಿದರು. ಎಸ್‌ಡಿಎಂಸಿ ಸರ್ವ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು, ಅಧ್ಯಾಪಕ ವೃಂದದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com